ಚಾಮರಾಜನಗರ

ಜೀವನದಲ್ಲಿ ಶಿಸ್ತು ಅಗತ್ಯ: ಇಂದುಶೇಖರ್

Published On :

ಚಾಮರಾಜನಗರ: ಶಿಸ್ತು, ಸಂಯಮ, ಸಮಯಪ್ರಜ್ಞೆ, ಸೇವಾ ಮನೋಭಾವನೆಯು ರಾಷ್ಟ್ರೀಯ ಸೇವಾ ಯೋಜನೆಯ ಕೊಡುಗೆಗಳು ಎಂದು ವಕೀಲ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.
ತಾಲೂಕಿನ ಅಟ್ಟುಗೂಳಿಪುರ ಗ್ರಾಮದಲ್ಲಿ ನಗರದ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜು ವತಿಯಿಂದ  ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿ, ಯಾವುದೇ ವ್ಯಕ್ತಿ ಪ್ರತಿಭಾವಂತನಾಗಿ ಹೊರ ಹೊಮ್ಮಬೇಕಾದರೆ ಜೀವನದಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ, ಸೇವಾ ಮನೋಭಾವ ಅಗತ್ಯ. ಇಂಥ ಗುಣಗಳನ್ನು ರೂಢಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯಂಥ ಶಿಬಿರಗಳು ಸಹಕಾರಿಯಾಗಲಿವೆ ಎಂದರು.   
ಕುದೇರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಎಂ.ನಾಗಮಲ್ಲಪ್ಪ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ತಮ್ಮಲ್ಲಿ ದ್ವೇಷ, ಅಸೂಯೆ ಮನೋಭಾವನೆಯನ್ನು ಬಿಟ್ಟು ಗುರುಹಿರಿಯರ ಮಾರ್ಗದರ್ಶನ ಪಡೆದು, ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದರು.
ಸ್ಫೂರ್ತಿ ಟ್ರಸ್ಟ್ ಅಧ್ಯಕ್ಷ ಎ.ಎಸ್.ಮಹದೇವಸ್ವಾಮಿ, ಶಿಬಿರಾಧಿಕಾರಿ ಶಿವಣ್ಣ, ಉಪನ್ಯಾಸಕರಾದ ದಿವ್ಯಗೌಡ, ಗುರುಪ್ರಸಾದ್, ಶೀಲ, ಸಂತೋಷ್ ಇದ್ದರು. ದಾಕ್ಷಾಯಿಣಿ ಸ್ವಾಗತಿಸಿ, ಪವಿತ್ರ ವಂದಿಸಿದರು. ಅನುಷಾ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.