ಇಂದು ಅಥವಾ ನಾಳೆ ಜಯಾಗೆ ಸಿಎಂ ಪತ್ರ
ಚಾಮರಾಜನಗರ: ತಾಳವಾಡಿ ಘಟನೆಗೆ ಸಂಬಂಧಿಸಿದಂತೆ ಭಾಷಾ ಸಾಮರಸ್ಯ ಕಾಪಾಡಲು ಹಾಗೂ ಕನ್ನಡಿಗರಿಗೆ ರಕ್ಷಣೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಿಎಂ ಜಗದೀಶ್ ಶೆಟ್ಟರ್ ಪತ್ರ ಬರೆಯಲಿದ್ದಾರೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ಯಾರೋ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ವರದಿ ನೀಡಿದ್ದಾರೆ. ರಾಜ್ಯದ ಗಡಿ ಭಾಗದ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದನ್ನು ಮುಂದುವರಿಸಲಾಗುತ್ತದೆ. ಅದರಂತೆ ಕನ್ನಡಕ್ಕೆ ಇದ್ದ 100 ಅಂಕಗಳನ್ನು ಮತ್ತೆ 100 ಅಂಕಗಳಿಗೆ ಏರಿಸಬೇಕು ಹಾಗೂ ತಾಳವಾಡಿ ಗಡಿ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಪತ್ರ ಬರೆಯಲಾಗುವುದು ಎಂದರು.
ತಾಳವಾಡಿ ಗಡಿ ಕನ್ನಡಿಗರ ರಕ್ಷಣೆ ಹಾಗೂ ಭಾಷಾ ಸಾಮರಸ್ಯ ಕಾಪಾಡುವ ಸಂಬಂಧ ಜ.25 ರಂದು ಸಂಘ ಸಂಸ್ಥೆಗಳ ಮುಖಂಡರು, ಸಂಸದರು, ಚುನಾಯಿತ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸಲಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

