ಮತದಾರ ಎಚ್ಚೆತ್ತರೆ ಮಾತ್ರ ಒಳ್ಳೆಯ ನಾಯಕ ಸಿಗುತ್ತಾನೆ
ಚಾಮರಾಜನಗರ: ಕ್ರಿಮಿನಲ್ ಹಿನ್ನೆಲೆಯುಳ್ಳವರು ಮತ್ತು ಭ್ರಷ್ಟ ಜನಪ್ರತಿನಿಧಿಗಳು ಆಯ್ಕೆಯಾಗದಂತೆ ಕಡಿವಾಣ ಹಾಕಬೇಕಾದರೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರಾಗಬೇಕು ಎಂದು ಜಿಲ್ಲಾಧಿಕಾರಿ ಎನ್. ಜಯರಾಂ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ವಿವಿಧ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳನ್ನೊಳಗೊಂಡ ಬೃಹತ್ ಮಾನವ ಸರಪಳಿಗೆ ಚಾಲನೆ ನೀಡಿ ಮಾತನಾಡಿ, ಭಾರತ ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜ.25ರಂದು ಮತದಾರರ ದಿನ ಆಚರಿಸುತ್ತಿದೆ. ಅದಕ್ಕಿಂತ ಮುಂಚಿತವಾಗಿಯೇ ಯುವ ಜನಾಂಗವನ್ನು ಮತದಾರರನ್ನಾಗಿ ಮಾಡುವ ನಿಟ್ಟಿನಲ್ಲಿ ಮತ್ತು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಸಲುವಾಗಿ ಬೃಹತ್ ಮಾನವ ಸರಪಳಿ ಏರ್ಪಡಿಸಲಾಗಿದೆ ಎಂದರು.
ಮತದಾರ ಎಚ್ಚೆತ್ತುಕೊಂಡರೆ ಮಾತ್ರ ಎಚ್ಚೆತ್ತ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರಾಗಬೇಕು ಎಂದರು.
ಮನಸೂರೆಗೊಂಡ ಜಾಥಾ: ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಏರ್ಪಡಿಸಿದ್ದ ಬೃಹತ್ ಮಾನವ ಸರಪಳಿಯು ಭುವನೇಶ್ವರಿ ವೃತ್ತದಿಂದ ರಾಮಸಮುದ್ರದ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ, ಗುಂಡ್ಲುಪೇಟೆ ವೃತ್ತದಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ವೃತ್ತ, ಅಲ್ಲಿಂದ ಖಾಸಗಿ ಬಸ್ ನಿಲ್ದಾಣ, ಭಾರತೀಯ ಜೀವ ವಿಮಾ ನಿಗಮ ಕಚೇರಿ ವೃತ್ತ, ಸಂತೇಮರಹಳ್ಳಿ ವೃತ್ತ, ಆರ್ಚ್ ಗೇಟ್ ರಸ್ತೆಯಿಂದ ಗುಂಡ್ಲುಪೇಟೆ ವೃತ್ತ, ಸುಲ್ತಾನ್ ಷರೀಫ್ ವೃತ್ತದಿಂದ ಸಂತೇಮರಹಳ್ಳಿ ವೃತ್ತ, ಅಲ್ಲಿಂದ ಭುವನೇಶ್ವರಿ ವೃತ್ತದತ್ತ ಸಾಗಿ, ಜಿಲ್ಲಾ ಸೆಷನ್ಸ್ ಕೋರ್ಟ್‌ನಿಂದ ಡಿವೈಎಸ್ಪಿ ಕಚೇರಿವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ನೋಡುಗರ ಗಮನ ಸೆಳೆಯಿತು.
ಎಡಿಸಿ ಭಾರತಿ, ಉಪವಿಭಾಗಾಧಿಕಾರಿ ಎಚ್.ಎಸ್. ಸತೀಶ್‌ಬಾಬು, ಪ್ರೊಬೇಷನರಿ ಎಸಿ ವಿಜಯಾ, ಚುನಾವಣಾ ತಹಸೀಲ್ದಾರ್ ಕಾಂತಮಣಿ, ತಹಶೀಲ್ದಾರ್‌ಗಳಾದ ಚಂದ್ರಕಾಂತ್ ಭಜಂತ್ರಿ, ಕೆ.ಎಂ.ಸುರೇಶ್‌ಕುಮಾರ್, ಮಹದೇವ್, ಎಎಸ್ಪಿ ಚಂದ್ರಶೇಖರ್, ಪೊಲೀಸ್ ವೃತ್ತ ನಿರೀಕ್ಷಕ ಅನ್ಸರ್ ಆಲಿ, ವಿವಿಧ ಕಾಲೇಜಿನ ಪ್ರಾಂಶುಪಾಲರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

