ಚಾಮರಾಜನಗರ

ಭ್ರಷ್ಟಾಚಾರ ತಡೆಗೆ ಪ್ರತ್ಯೇಕ ಕಾರ್ಯಪಡೆ ಬೇಕು

Published On :

ಚಾಮರಾಜನಗರ: ಬೃಹದಾಕಾರವಾಗಿ ಬೆಳೆದಿರುವ ಭ್ರಷ್ಟಾಚಾರವನ್ನು ಬೇರು ಸಮೇತ ಕಡಿದು ಹಾಕಲು ಸರ್ಕಾರ ಪ್ರತ್ಯೇಕವಾದ ಜಾಗೃತಿ ಕಾರ್ಯ ಪಡೆ ರಚಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಭ್ರಷ್ಟಾಚಾರ ಇಂದು ದೇಶಕ್ಕೆ ಮಾರಕ ಪಿಡುಗಾಗಿ ಪರಿಣಮಿಸಿದೆ. ಇದನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ ಆಸಕ್ತಿ ವಹಿಸುವುದರ ಜೊತೆಗೆ ಜನರು ಇದರ ಬಗ್ಗೆ ಜಾಗೃತಿಯಾಗಬೇಕಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಾಧ್ಯಕ್ಷ ಎಚ್.ಎನ್.ನಂಜುಂಡ್‌ರಾಜ್ ಮಾತನಾಡಿ, ಭ್ರಷ್ಟಾಚಾರದ ನಿರ್ಮೂಲನೆಗೆ ಪ್ರತಿಯೊಬ್ಬರು ಸಂಘಟಿತರಾಗಿ ತಾಳ್ಮೆ, ದಿಟ್ಟತನ, ಕಾನೂನಿನ ಅರಿವು ಪಡೆಯಬೇಕು ಎಂದರು.
ಸಾಹಿತಿ ನಾಗೇಶ್ ಸೋಸ್ಲೆ ಮಾತನಾಡಿ, ಭ್ರಷ್ಟಾಚಾರ ಎಂಬ ಅವ್ಯವಸ್ಥೆಯ ಸಮಾಜದಲ್ಲಿ ಬದುಕುವ ಅಸಹನೀಯ ಸ್ಥಿತಿಯಲ್ಲಿ ನಾವಿದ್ದೇವೆ. ಎಲ್ಲಿಯವರೆಗೆ ಜನತೆ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುವುದಿಲ್ಲವೋ, ಅಲ್ಲಿವರೆಗೂ ಇಂಥ ಸಮಸ್ಯೆಗಳು ದ್ವಿಗುಣವಾಗುತ್ತವೆ. ಭ್ರಷ್ಟಾಚಾರಕ್ಕೆ ಶಾಶ್ವತ ಪರಿಹಾರ ಸಿಗಬೇಕಾದರೆ ಕಾನೂನಾತ್ಮಕ ಅವಕಾಶಗಳನ್ನು ಉಪಯೋಗಿಸಿಕೊಂಡು, ಮುಕ್ತಗೊಳಿಸುವ ನಿಟ್ಟಿನಲ್ಲಿ ವೇದಿಕೆ ದುಡಿಯಬೇಕು ಎಂದರು.
ಸಮಾರಂಭದಲ್ಲಿ ಭ್ರಷ್ಟಾಚಾರ ವಿರೋಧಿ ಅಂದೋಲನ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಪರಶಿವಮೂರ್ತಿ, ವಕೀಲ ಎಂ.ಪುಟ್ಟಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಸುರೇಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಬದನಗುಪ್ಪೆ ಮಹೇಶ್, ನಂಜನಗೂಡು ತಾಲೂಕು ಅಧ್ಯಕ್ಷ ಕೌಲಂದೆ ಮಹೇಶ್, ಚಾಮರಾಜನಗರ ನೂತನ ತಾಲೂಕು ಅಧ್ಯಕ್ಷ ಉಮ್ಮತ್ತೂರು ಚಂದ್ರು ಇತರರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.