ಇಂದು ಡಿಡಿಪಿಐ ಬೆಳ್ಳಶೆಟ್ಟಿ ಅಭಿನಂದನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ವರ್ಗಾವಣೆಯಾದ ಬೆಳ್ಳಶೆಟ್ಟಿ ಅವರಿಗೆ ಜ.30 ರಂದು ಮೈಸೂರಿನ ಮಹಾರಾಣಿ ಪ್ರಶಿಕ್ಷಣ ಸಂಸ್ಥೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಬೆಳ್ಳಶೆಟ್ಟಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಮೈಸೂರು ವಿಭಾಗೀಯ ಮಟ್ಟದ 2011-12ನೇ ಸಾಲಿನ ಗುಣಮಟ್ಟದ ಶಿಕ್ಷಣಕ್ಕಾಗಿ ಅತ್ಯುತ್ತಮ ನಿರ್ದೇಶಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಗುತ್ತಿದೆ.
ಮುದ್ದುಮಾದಪ್ಪ ದತ್ತಿ ಕಾರ್ಯಕ್ರಮ
ಚಾಮರಾಜನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜ.30 ರಂದು ಮಧ್ಯಾಹ್ಮ 2.30ಕ್ಕೆ ತಾಲೂಕಿನ ವೆಂಕಟಯ್ಯನ ಛತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮುದ್ದುಮಾದಪ್ಪ ದತ್ತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಸಾಹಿತಿ, ದತ್ತಿದಾನಿ ಮಂಗಳಮ್ಮ ಮುದ್ದುಮಾದಪ್ಪ ಉದ್ಘಾಟಿಸುವರು. ಸಾಹಿತಿ, ಪ್ರಾಧ್ಯಾಪಕ ರಾಜಶೇಖರ್ ಜಮದಂಡಿ ಅವರು ವಚನ ಸಾಹಿತ್ಯ, ಜೀವನ ಮೌಲ್ಯಗಳು ಕುರಿತು ಉಪನ್ಯಾಸ ನೀಡುವರು. ಉಪ ಪ್ರಾಂಶುಪಾಲ ಎಂ.ಮುತ್ತುರಾಜ್, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಂಜುಂಡಸ್ವಾಮಿ ಭಾಗವಹಿಸುವರು.
ಇಂದು ಸಭೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಪರಿಶಿಷ್ಟ ಜಾತಿ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ಜ.30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ ದಲಿತ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯಸ್ಥರು, ನಾಗರಿಕರು ಹಾಜರಾಗಿ ಕುಂದುಕೊರತೆಗಳನ್ನು ಸಲ್ಲಿಸಬಹುದು. ಅಲ್ಲದೆ ಅಗತ್ಯ ಸಲಹೆ ನೀಡುವಂತೆಯೂ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಂದು ಶಕ್ತಿಬಿಂದು ಕಾರ್ಯಾಗಾರ
ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜ.30 ರಂದು ಬೆಳಗ್ಗೆ 11.30 ಕ್ಕೆ ಚಿಕೂನ್ಗುನ್ಯಾ ಮತ್ತು ಡೆಂಘೀ ರೋಗಗಳ ಬಗ್ಗೆ ಶಕ್ತಿಬಿಂದು ಕಾರ್ಯಾಗಾರವನ್ನು ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 307 ರಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಹೇಮಂತ್ಕುಮಾರ್ ಅವರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

