ಮತದಾನ ಎಲ್ಲರ ಹಕ್ಕು
ಕ.ಪ್ರ.ವಾರ್ತೆ ್ಣ ಚಾ.ನಗರ ್ಣ ಮಾ.29
ಮತದಾನದ ಮಹತ್ವವನ್ನು ಎಲ್ಲರೂ ಅರಿಯಬೇಕು. ಜೊತೆಗೆ ಸರಿಯಾದ ವ್ಯಕ್ತಿ ಹಾಗೂ ಸರ್ಕಾರವನ್ನು ಆಯ್ಕೆ ಮಾಡುವ ಹಕ್ಕು ನಮ್ಮೆಲ್ಲರಿಗೂ ಇದೆ ಎಂದು ಕೊಳ್ಳೇಗಾಲ ಜೆಎಸ್‌ಎಸ್ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಎಚ್.ವಿ.ರವೀಶ್ ತಿಳಿಸಿದರು.
ಮತದಾರರ ಜಾಗೃತಿ ಆಂದೋಲನದ ಅಂಗವಾಗಿ ಕೊಳ್ಳೇಗಾಲ ಜೆಎಸ್‌ಎಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯಕ್ರಮ ಇದಾಗಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಏ.7ರವರೆಗೆ ಅವಕಾಶವಿದ್ದು, ಯುವಜನರು ತಮ್ಮ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಚುನಾವಣೆಯಲ್ಲಿ ಮತ ಚಲಾಯಿಸಬೇಕು ಎಂದರು.
ಪ್ರಾಂಶುಪಾಲರ ಪ್ರೊ. ಎಂ.ಪಿ.ವಿಜಯೇಂದ್ರಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಯುವಕರು ಮುಖ್ಯ ಪಾತ್ರ ವಹಿಸಲಿದ್ದು, ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ಭಾರತವನ್ನು ಬಲಪಡಿಸಲು ಯುವಕರು ಮುಂದಾಗಬೇಕು ಎಂದರು.
ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕನ್ನಡ ಉಪನ್ಯಾಸಕ ಎ.ಎಂ.ಮಹದೇವಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

