ಚಾಮರಾಜನಗರ

ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಣೆ ನಿಷೇಧ

Published On :

ಕ.ಪ್ರ.ವಾರ್ತೆ ್ಣ ಚಾ.ನಗರ ್ಣ ಮಾ.30
ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿರುವುದು ಕಂಡು ಬಂದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಸ್ಪಿ ಪಿ.ರಾಜೇಂದ್ರ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ನಾಗವಳ್ಳಿ ಬಳಿ ಮಾ.28ರಂದು ಚಾಮರಾಜನಗರ- ಕೆ.ಗುಡಿ ಮುಖ್ಯರಸ್ತೆ ಬಳಿ ಟಾಟಾ ಏಸ್ ವಾಹನದಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದಾಗ, ಸದರಿ ವಾಹನ ಮಗಚಿಕೊಂಡ   ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, ಮಾ.29ರಂದು ಸಂತೇಮರಹಳ್ಳಿ- ಚಾಮರಾಜನಗರ ಮುಖ್ಯರಸ್ತೆಯ ಹುಲ್ಲೇಪುರ ಗೇಟ್ ಬಳಿ ಟಾಟಾ ಏಸ್ ವಾಹನದಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದಾಗ, ಮಗುಚಿಕೊಂಡ ಪರಿಣಾಮ ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸರು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಇನ್ನು ಮುಂದೆ ಜಿಲ್ಲೆಯಲ್ಲಿ ಈ ರೀತಿ ಸರಕು ಸಾಗಾಣಿಕೆ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಂಡುಬಂದಲ್ಲಿ ಅಂಥ ವಾಹನ ಚಾಲಕರ ಪರವಾನಗಿಯನ್ನು ರದ್ದುಪಡಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಮತ್ತು ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.