ಬಸವೇಶ್ವರ ಜನ್ಮ ದಿನಾಚರಣೆ ಇಂದು
ಚಾಮರಾಜನಗರ: ಯಳಂದೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜನ್ಮ ದಿನೋತ್ಸವ ಆಚರಣೆಯನ್ನು ಜು. 11ರಂದು ಬೆಳಗ್ಗೆ 9 ಗಂಟೆಗೆ ಯಳಂದೂರು ಪಟ್ಟಣದ ಜಹಗೀರ್ದಾರ್ ಬಂಗಲೆಯ ಮುಂಭಾಗ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9 ಗಂಟೆಗೆ ಕೆಸ್ತೂರು ಪಟ್ಟದ ಮಠಾಧ್ಯಕ್ಷ ತೋಂಟದಾರ್ಯಸ್ವಾಮೀಜಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಮೆರವಣಿಗೆಯಲ್ಲಿ ನಾದಸ್ವರ, ನಂದಿಧ್ವಜ, ವೀರಗಾಸೆ, ಭಜನೆ, ಗೊರವರ ಕುಣಿತ, ಗಾರುಡಿ ಗೊಂಬೆ, ದೊಡ್ಡ ಅರಸಿನ ಕೆರೆ ಹುಲಿ ವೇಷಧಾರಿ ಕುಣಿತ, ವಿವಿಧ ಜನಪದ ಕಲಾ ತಂಡಗಳು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ಘಟಕದ ಅಧ್ಯಕ್ಷ ವೈ. ಎನ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಂ. ಪಿ. ಪುಟ್ಟಣ್ಣ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

