ಚಾಮರಾಜನಗರ

'ವಿಕಲಚೇತನರು ವಿದ್ಯಾವಂತರಾಗಲಿ'

Published On :

ಗುಂಡ್ಲುಪೇಟೆ: ಅಂಗವಿಕಲ ಮಕ್ಕಳನ್ನು ಸ್ವಾವಲಂಭಿಗಳಾಗಿ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಅವರನ್ನು ವಿದ್ಯಾವಂತರನ್ನಾಗಿ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ತಾಪಂ ಅಧ್ಯಕ್ಷ ಕನ್ನೇಗಾಲಸ್ವಾಮಿ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯಲ್ಲಿ ನಡೆದ ಈ ಸಾಲಿನ ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯ ತಪಾಸಣೆ ಶಿಬಿರದ ಅಂಗವಾಗಿ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಅಂಗವಿಕಲರಿಗಾಗಿ ಹಲವು ಯೋಜನೆಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಜಾರಿಗೆ  ತಂದಿದ್ದು, ಎಲ್ಲ ಇಲಾಖೆಗಳಲ್ಲು ಶೇ.3 ರಷ್ಟು ಮೀಸಲು ಇರುವ ಕಾರಣ ಅಂಗವಿಕಲರು ಧೃತಿಗೆಡಬಾರದು ಎಂದು ಹೇಳಿದರು.
ಶಿಬಿರ ಉದ್ಘಾಟಿಸಿದ ಪುರಸಭೆ ಅಧ್ಯಕ್ಷ ಪಿ.ಚಂದ್ರಪ್ಪ ಮಾತನಾಡಿ, ಅಂಗವಿಕಲತೆ ಶಾಪವಲ್ಲ. ವಿಕಲತೆ ಇರುವವರಿಗೆ ಬೇಕಾದ ಸೌಲಭ್ಯ ಕಲ್ಪಿಸಲು ಸರ್ಕಾರ ಇದೆ. ಸರ್ಕಾರ ನೀಡುವ ಸೌಲಭ್ಯ ಸದ್ಭಳಕೆ ಮಾಡಿಕೊಂಡು ಜೀವನ ಮಟ್ಟ ಉತ್ತಮ ಪಡಿಸಿಕೊಳ್ಳಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಸೀಲ್ದಾರ್ ಜಿ. ಎಸ್. ರಂಗನಾಥ, ತಾಪಂ ಉಪಾಧ್ಯಕ್ಷ ಬಂಗಾರನಾಯಕ, ಗೋಪಾಲಸ್ವಾಮಿ ಬೆಟ್ಟದ ಪ್ರಧಾನ ಅರ್ಚಕ ಗೋಪಾಲಕೃಷ್ಣ, ಜಿಲ್ಲಾ ಉಪ ಸಮನ್ವಯಾಧಿಕಾರಿ ಗುರುಲಿಂಗಯ್ಯ, ಬಿಆರ್‌ಸಿ ಚನ್ನಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರಬಾಬು, ಎನ್‌ಎಬಿ ಸಂಸ್ಥೆಯ ರಮೇಶ್ ಸೇರಿದಂತೆ ನೂರಾರು ಅಂಗವಿಕಲ ಮಕ್ಕಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.