ದಸರಾ ಸಭೆ ಆ.2ಕ್ಕೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಕುರಿತು ಚರ್ಚಿಸಲು ಆ.2 ರಂದು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯನ್ನು ಮೈಸೂರಿನಲ್ಲಿ ಕರೆಯಲಾಗಿದೆ ಎಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉದ್ಘಾಟನೆಗೆ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಉಳಿದ ವಿಚಾರವನ್ನು ಆ.2 ರಂದು ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಗಜಪಯಣ, ಸಾಹಿತಿ ಗಿರೀಶ್ ಕಾರ್ನಾಡ್, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಗಣ್ಯರನ್ನು ಆಹ್ವಾನಿಸುವ ದಿನಾಂಕವನ್ನು ಸಭೆಯಲ್ಲಿ ನಿಗದಿಪಡಿಸಲಾಗುವುದು ಎಂದರು.
ರಾಜಮನೆತನದವರಿಗೆ ಸಾಂಪ್ರದಾಯಿಕ ಆಹ್ವಾನ: ಸಂಪ್ರದಾಯದಂತೆ ರಾಜಮನೆತನದವರನ್ನು ಆಹ್ವಾನಿಸಲಾವುದು. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾದೇವಿ ಒಡೆಯರ್ ಅವರನ್ನು ಸಂಪ್ರದಾಯದಂತೆ ಆಹ್ವಾನಿಸಿ, ರಾಜಧನ ನೀಡಲಾಗುವುದು ಎಂದು ಸಚಿವರು ಹೇಳಿದರು.
ಆ.1ಕ್ಕೆ ಸಿಎಂ ವಿಡಿಯೋ ಕಾನ್ಫ್ರೆನ್ಸ್: ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಪ್ರವಾಹ ಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಆ.1 ರಂದು ವಿಡಿಯೋ ಕಾನ್ಫ್ರೆನ್ಸ್ ನಡೆಸಲಾಗುವುದು. ವಿಧಾನಸೌಧದಲ್ಲಿ ನಡೆಯುವ ಈ ಕಾನ್ಫ್ರೆನ್ಸ್ನಲ್ಲಿ 30 ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಪಂ ಸಿಇಒ, ಎಸ್ಪಿ ಅವರೊಂದಿಗೆ ಮುಖ್ಯಮಂತ್ರಿಯವರು ಚರ್ಚಿಸುವರು ಎಂದರು. ಪ್ರವಾಹ ಸ್ಥಿತಿ ಎದುರಿಸಲು ಸರ್ಕಾರ ಸಜ್ಜಾಗಿದ್ದು, ಎಲ್ಲ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

