ಚಿಕ್ಕಮಗಳೂರು

ಕರಡಿಗಳ ಗುಂಪು ದಾಳಿ: ವ್ಯಕ್ತಿಗೆ ಗಾಯ

Published On :

ಚಿಕ್ಕಮಗಳೂರು: ಹೊಲಕ್ಕೆ ನೀರು ಹಾಯಿಸಲು ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ತಾಲೂಕಿನ ಸಿರಬಡಿಗೆ ಗ್ರಾಮದ ಬಳಿ ಶನಿವಾರ ರಾತ್ರಿ ಕರಡಿಗಳ  ಗುಂಪೊಂದು ದಾಳಿ ನಡೆಸಿದೆ.
ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಕುನ್ನಾಳು ಗ್ರಾಪಂ ಉಪಾಧ್ಯಕ್ಷ ಎಸ್. ಯೋಗೀಶ್ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿರಬಡಿಗೆ ಗ್ರಾಮದ ಸುತ್ತಮುತ್ತ ಕರಡಿಗಳ ಗುಂಪೊಂದು ಇದ್ದು, ಆಗಾಗ ಸಾರ್ವಜನಿಕರಿಗೆ ತೊಂದರೆ ನೀಡುತ್ತಿವೆ. ಹೊಲಗಳಿಗೆ ನೀರು ಹಾಯಿಸಲು ರಾತ್ರಿ ವೇಳೆಯಲ್ಲಿ ಹೋಗಲು ಭಯವಾಗುತ್ತಿದೆ ಎಂದು ಗ್ರಾಮಸ್ಥರು ಕಳೆದ ಒಂದೂವರೆ ತಿಂಗಳ ಹಿಂದೆ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು. ಆದರೆ, ಈವರೆಗೆ ಸ್ಪಂದಿಸಿಲ್ಲ.  ಇಲಾಖೆಯವರ ನಿರ್ಲಕ್ಷೆಯಿಂದ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶನಿವಾರ ರಾತ್ರಿ ಸುಮಾರು 10.30ರ ವೇಳೆಗೆ ಯೋಗೀಶ್ ಹೊಲಕ್ಕೆ ನೀರು ಹಾಯಿಸಲು ಹೋಗಿದ್ದಾಗ ಮೂರು ಕರಡಿಗಳು ದಿಢೀರ್ ದಾಳಿ ನಡೆಸಿದ್ದು, ಇದರಿಂದಾಗಿ ಯೋಗೀಶ್ ಅವರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.