ಪ್ರಥಮ ಪೋಲಿಯೋ ಮುಕ್ತ ರಾಜ್ಯ
ನರಸಿಂಹರಾಜಪುರ: ಕರ್ನಾಟಕ ದೇಶದಲ್ಲೇ ಪ್ರಥಮ ಪೋಲಿಯೋ ಮುಕ್ತ ರಾಜ್ಯವಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಡಿ.ಎನ್. ಜೀವರಾಜ್ ತಿಳಿಸಿದರು.
ಅವರು ಭಾನುವಾರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೋಲಿಯೋ ಮುಕ್ತ ರಾಜ್ಯವಾಗಲು ರಾಜ್ಯದ ಎಲ್ಲಾ ಸಂಘ ಸಂಸ್ಥೆಗಳು, ವೈದ್ಯರು ಕಾರಣರಾಗಿದ್ದಾರೆ. ಇದಕ್ಕಾಗಿ ಆರೋಗ್ಯ ಇಲಾಖೆಯನ್ನು ಅಭಿನಂದಿಸುತ್ತೇನೆ ಎಂದರು.
ಚಿಕ್ಕಮಗಳೂರು ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಲು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಕೊಪ್ಪ ಹಾಗೂ ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಯನ್ನು ತಲಾ ರು. 5 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ನಿರ್ಮೂಲನ ಹಂತ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀರಜ್ ಮಾತನಾಡಿ, ಕಳೆದ 18 ವರ್ಷಗಳಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ಪೋಲಿಯೋ ರೋಗ ನಿರ್ಮೂಲನ ಹಂತ ತಲುಪಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 1 ಲಕ್ಷ 5 ಸಾವಿರದ 488 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 869 ತಂಡಗಳನ್ನು ರಚಿಸಲಾಗಿದೆ. 185 ಮೇಲ್ವಿಚಾರಕರಿದ್ದಾರೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ರುಕ್ಮುಣಿ ಸುರೇಶ್, ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಜಾತಾ, ರೋಟರಿ ಸಂಸ್ಥೆ ಅಧ್ಯಕ್ಷ ಧನಂಜಯ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಪಿ.ಜೆ. ಆಂಟೋನಿ, ತಾಲೂಕು ವೈದ್ಯಾಧಿಕಾರಿ ಡಾ. ಸೀಮಾ, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಬಾಲಕೃಷ್ಣ ಹಾಗೂ ಇತರೆ ವೈದ್ಯರು ಉಪಸ್ಥಿತರಿದ್ದರು.
ಪಿ. ಪ್ರಭಾಕರ್ ಸ್ವಾಗತಿಸಿ, ಜಯಣ್ಣ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

