ಕಾರ್ಯಾಗಾರ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಪ್ರಸಾರಾಂಗ ವಿಭಾಗ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಜಛ.22ರಂದು ಬೆಳಿಗ್ಗೆ 10.30ಕ್ಕೆ ವಿವಿಯ ಪ್ರೊ.ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಕನ್ನಡ ಸಾಹಿತ್ಯ- ಹೊಸ ಓದು ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಿದೆ. ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಸ್.ಎ. ಬಾರಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಕಮಲಾಕರ್ ಕುವೆಂಪು ವಿಶ್ವವಿದ್ಯಾನಿಲಯದ ಪ್ರಸಾರಾಂಗ ನಿರ್ದೇಶಕ ಡಾ.ಜಿ. ಪ್ರಶಾಂತ ನಾಯಕ್, ಉಪನಿರ್ದೇಶಕ ಡಾ. ಶಿವಾನಂದ ಕೆಳಗಿನಮನಿ ಮತ್ತು ಸಹನಿರ್ದೇಶಕ ಡಾ.ಬಿ.ಇ. ಕುಮಾರಸ್ವಾಮಿ ಉಪಸ್ಥಿತರಿರುವರು.
ವಿಚಾರಗೋಷ್ಠಿಯಲ್ಲಿ ಪ್ರೊ. ಕುಮಾರಚಲ್ಯ ಅವರು ಪ್ರಾಚೀನ ಕನ್ನಡ ಸಾಹಿತ್ಯ, ಪ್ರೊ. ಸಣ್ಣರಾಮ ಮಧ್ಯಕಾಲೀನ ಕನ್ನಡ ಸಾಹಿತ್ಯ, ಡಾ.ಜಿ. ಪ್ರಶಾಂತ ನಾಯಕ್ ಆಧುನಿಕ ಕನ್ನಡ ಸಾಹಿತ್ಯದ ಕುರಿತು ವಿಚಾರ ಮಂಡಿಸಲಿದ್ದಾರೆ. ನಂತರ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಯಲಿದೆ.
ನೇಮಕಾತಿ ರ್ಯಾಲಿ
ಶಿವಮೊಗ್ಗ: ಬೆಂಗಳೂರಿನ ಕೇಂದ್ರ ಕಾರ್ಯಸ್ಥಾನ ನೇಮಕಾತಿ ವಲಯವು ಭೂಸೈನ್ಯದಲ್ಲಿ ಖಾಲಿ ಇರುವ ಸೋಲ್ಜರ್ ಕ್ಲರ್ಕ್ ಹಾಗೂ ಸ್ಟೋರ್ಕೀಪರ್ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದೆ. ಫೆ.4ರಂದು ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ಸ್ಟೇಡಿಯಂನಲ್ಲಿ ನೇಮಕಾತಿ ರ್ಯಾಲಿ ಏರ್ಪಡಿಸಿದೆ. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕ ಪಡೆದಿದ್ದು, ಪ್ರತಿ ವಿಷಯದಲ್ಲಿ ಶೇ.40ರಷ್ಟು ಅಂಕ ಗಳಿಸಿರಬೇಕು. 17ರಿಂದ 23 ವರ್ಷ ವಯೋವುತಿಯೊಳಗಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದು. ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದು. ವಿವರಗಳಿಗಾಗಿ- 08182-220925.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

