ಮಾರ್ಚ್ನಲ್ಲಿ ತಾ. ಸಾಹಿತ್ಯ ಸಮ್ಮೇಳನ
ನರಸಿಂಹರಾಜಪುರ: 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ ತಿಂಗಳ ಮೊದಲನೇ ವಾರದಲ್ಲಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಭಾನುವಾರ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ತಾ. ಕಸಾಪ ಅಧ್ಯಕ್ಷ ಎಸ್.ಜಿ. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಡಿ.ಎನ್. ಜೀವರಾಜ್ ಅವರನ್ನು ಆಯ್ಕೆ ಮಾಡಲಾಯಿತು. ವಿವಿಧ ಸಂಘ ಸಂಸ್ಥೆಗಳನ್ನೊಳಗೊಂಡಂತೆ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಸಹಕರಿಸಲು ಮನವಿ: ಸಭೆಯ ಅಧ್ಯಕ್ಷತೆ ವಹಿಸಿದ್ದ ತಾ. ಕಸಾಪ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ತಾಲೂಕಿನ ಎಲ್ಲಾ ಜನ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯಾಸಕ್ತರು ಸಮ್ಮೇಳನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಸಾಪ ಜಿಲ್ಲಾ ಸಂಚಾಲಕ ಎಸ್.ಎಸ್. ವೆಂಕಟೇಶ್ ಮಾತನಾಡಿ, ಸಾಹಿತ್ಯ ಪರಿಷತ್ ಉತ್ತಮ ಸಂಘಟನೆ ಮಾಡುವ ಮೂಲಕ ಕ್ರಿಯಾಶೀಲರಾಗಿ ಕೆಲಸ ಮಾಡಬೇಕಾಗಿದೆ. ಸಮ್ಮೇಳನ ನಡೆಯುವ ವಿಚಾರವನ್ನು ಸಾಮಾನ್ಯ ಜನರಿಗೂ ತಿಳಿಯುವಂತೆ ಪ್ರಚಾರ ಮಾಡಬೇಕು ಎಂದರು.
ತಾ. ಕಸಾಪ ಮಾಜಿ ಅಧ್ಯಕ್ಷ ಕೆ.ಟಿ. ವೆಂಕಟೇಶ್, ಮೀನಾಕ್ಷಿ ಕಾಂತರಾಜ್, ಭಾಗ್ಯನಂಜಂಡಸ್ವಾಮಿ, ಜಯಮ್ಮ, ಮಂಜುನಾಥ್, ಮೋಗಣ್ಣಗೌಡ, ಶ್ರೀನಾಥ್, ಸುಬ್ಬಣ್ಣನಾಡಿಗ್, ಚಕ್ರಪಾಣಿ, ರವಿಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

