26ರಂದು ಸಂವಾದ
ಶೃಂಗೇರಿ: ತಾಲೂಕಿನ ಕೂತಗೋಡು ಪಂಚಾಯಿತಿ ಗಾಳಿತೋಟದಲ್ಲಿ ಜ.26 ರ ಶನಿವಾರ “«ÚÈÚß½ ಮನೆಯಂಗಳದಿ ನಮ್ಮ ನಿಮ್ಮ OÚßÈÚáÛÁÚy|’ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಡಿಕೆ ಹಳದಿ ಎಲೆ ರೋಗ ಮತ್ತಿತರ ರೋಗಗಳು ಮತ್ತು ಬಡ ಕೂಲಿ ಕಾರ್ಮಿಕರ ಆಶ್ರಯ ಬಡಾವಣೆ ಬಗ್ಗೆ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರೊಂದಿಗೆ ಮುಕ್ತ ಸಂವಾದ ಏರ್ಪಡಿಸಲಾಗಿದೆ. ಸಂವಾದ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಯಿಂದ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ರಾಜ್ಯ ಸಂಚಾಲಕ ವೈಎಸ್ವಿ ದತ್ತ, ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆ
ನರಸಿಂಹರಾಜಪುರ: ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಕಾನೂರು ಶಾಲೆಯ ಶಿಕ್ಷಕರಾದ ಎಚ್.ಸಿ. ಬಸವರಾಜು ಅವರು ಲೈಫ್ ಬಯ್ಸೋಪಿನಲ್ಲಿ ಮಾನವನ ಹೃದಯ, ಶ್ವಾಸಕೋಶ, ಮೂತ್ರ ಜನಾನಂಗ ತಯಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತವಾಗಿ 2 ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ರಾಜಶೇಖರ್, ಮುಖ್ಯ ಶಿಕ್ಷಕ ಅಣ್ಣಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಗುರುಶಾಂತಪ್ಪ ಅಭಿನಂದಿಸಿದ್ದಾರೆ.
ಇಂದು ಕಿವಿಮಾತು
ನರಸಿಂಹರಾಜಪುರ: ಜೀವನ ಜ್ಯೋತಿ ಪ್ರೌಢಶಾಲೆಯ ಆವರಣದಲ್ಲಿ ಹದಿಹರೆಯದ ಮಕ್ಕಳಿಗೆ ಮಾಹಿತಿ ನೀಡುವ ಕಿಶೋರ-ಕಿಶೋರಿಯರಿಗೆ ಕಿವಿಮಾತು ಎಂಬ ಕಾರ್ಯಕ್ರಮವು ಜ.23ರಂದು ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದೆ. ಪ್ರತಿಧ್ವನಿ ಸಂಸ್ಥೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯವಿಭಾಗವು ಜಂಟಿಯಾಗಿ ಈ ಮಾಹಿತಿ ನೀಡುವ ಕಾರ್ಯಕ್ರಮ ನಡೆಸಿಕೊಡಲಿದೆ.
25ಕ್ಕೆ ವಾರ್ಷಿಕೋತ್ಸವ
ಶೃಂಗೇರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜ.25 ರಂದು ಆರ್ಐಡಿಎಫ್ 14 ನೇ ಯೋಜನೆಯ ಶಾಲಾ ಹೆಚ್ಚುವರಿ ಕೊಠಡಿಗಳು ಮತ್ತು ವಿಧಾನ ಪರಿಷತ್ ಸದಸ್ಯರು ಅನುದಾನ ಮತ್ತು ಜಿಪಂ ಸದಸ್ಯರುಗಳ ಅನುದಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಲ್ಲಿ ನಿರ್ಮಾಣಗೊಂಡ ಶಾರದಾ ಸಭಾಂಗಣ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಕಾರ್ಯಕ್ರ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಜೀವರಾಜ್ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಸಂಸದ ಜಯಪ್ರಕಾಶ್ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

