ತೆರಿಗೆ ಇಲಾಖೆ ನೂತನ ಕಟ್ಟಡ ಉದ್ಘಾಟನೆ
ಚಿಕ್ಕಮಗಳೂರು: ಆದಾಯ ತೆರಿಗೆ ಇಲಾಖೆಯ ನವೀಕೃತ ಕಟ್ಟಡವನ್ನು ಕರ್ನಾಟಕ- ಗೋವಾ ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತ ಕೆ. ಸತ್ಯನಾರಾಯಣ ಅವರು ಬುಧವಾರ ಉದ್ಘಾಟಿಸಿದರು.
ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ತೆರಿಗೆದಾರರಿಗೆ ಉತ್ತಮ ಸೌಲಭ್ಯ ಒದಗಿಸಲು ಇಲಾಖೆ ಬದ್ಧವಾಗಿದೆ. ತೆರಿಗೆದಾರರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದರಿಂದ ತೆರಿಗೆ ಸಂಗ್ರಹ ಪ್ರಮಾಣವೂ ಹೆಚ್ಚಳವಾಗಲಿದೆ. ಚಿಕ್ಕಮಗಳೂರಿನಲ್ಲಿ ಹಲವಾರು ಉದ್ಯಮ, ಕೈಗಾರಿಕೆಗಳಿಗೆ ಸೂಕ್ತ ವಾತಾವರಣವಿದೆ. ಆದರೂ, ಅನೇಕರು ಬೆಂಗಳೂರು ಮತ್ತಿತರ ನಗರಗಳಿಗೆ ತೆರಳಿ ಉದ್ಯಮ ಕೈಗೊಳ್ಳುತ್ತಿದ್ದಾರೆ ಎಂದರು.
ಆದಾಯ ತೆರಿಗೆ ಇಲಾಖೆಯ ಬೆಂಗಳೂರು ಮುಖ್ಯ ಆಯುಕ್ತ ಸುರೇಶ್ ಬಾಬು ಮಾತನಾಡಿ, ಆದಾಯ ತೆರಿಗೆ ಪಾವತಿದಾರರಿಗೆ, ತೆರಿಗೆ ಪರಿಶೋಧಕರಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಚಿಕ್ಕಮಗಳೂರು ಕಚೇರಿಯನ್ನು ನವೀಕರಿಸಲಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಇಲಾಖೆಯ ಮೈಸೂರು ವಿಭಾಗದ ಆಯುಕ್ತ ಕೆ.ಕೆ. ಮಿಶ್ರಾ, ಮೇಲ್ಮನವಿ ವಿಭಾಗದ ಆಯುಕ್ತ ಜಿ.ಆರ್. ರೆಡ್ಡಿ, ಐ.ಟಿ. ಅಧಿಕಾರಿಗಳ ಸಂಘದ ಕಾರ್ಯದರ್ಶಿ ನಾರಾಯಣ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

