ಕಠಿಣ ಕಾಯ್ದೆ ಜಾರಿಗೆ ಆಗ್ರಹ
ಮೂಡಿಗೆರೆ: ರಾಜ್ಯದಲ್ಲಿ ಮಹಿಳೆಯರು, ಅಪ್ರಾಪ್ತ ವಯಸ್ಸಿನ ಮಕ್ಕಳು ಹಾಗೂ ವೃದ್ಧೆಯರ ಮೇಲೆ ಅತ್ಯಾಚಾರ ದೌರ್ಜನ್ಯ ನಡೆಯುತ್ತಿದ್ದು, ಸರ್ಕಾರ ಕಠಿಣ ಕಾಯ್ದೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಇಂಚರ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸಫೂರಾಭಿ. ಸಿ. ಶೋಭಾ ಪ್ರತಿಭಟನೆ ನಡೆಸಿದರು.
ಮೂಡಿಗೆರೆ ಸಂಚಿಹೊನ್ನಮ್ಮ ಸಾಂತ್ವನ ಮಹಿಳಾ ಸಹಾಯಕವಾಣಿ ಕೇಂದ್ರ, ಇಂಚರ ಮಹಿಳಾ ಒಕ್ಕೂಟಗಳ ಸದಸ್ಯರು ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ವಿರೋಧಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಿ ಮಾತನಾಡಿದರು.
ರಾಜ್ಯವನ್ನು ಅತ್ಯಾಚಾರ ಹಾಗೂ ದೌರ್ಜನ್ಯ ಮುಕ್ತ ರಾಜ್ಯವನ್ನಾಗಿಸಿ, ಆರೋಪಿಗಳನ್ನು ರಾಜಕೀಯ ಒತ್ತಡದಿಂದ ಬಿಡುಗಡೆ ಮಾಡದಂತೆ ಕಠಿಣ ಕ್ರಮ ಜರುಗಿಸುವುದರೊಂದಿಗೆ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

