ದಕ್ಷಿಣ ಕನ್ನಡ

ಇಂದು ಸಂದರ್ಶನ

Published On :

ವಿಟ್ಲ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಹಾಗೂ ಸಮಾಜಕಾರ್ಯ ವಿಭಾಗಗಳ ಅತಿಥಿ ಉಪನ್ಯಾಸಕರ ರಾಜಿನಾಮೆಯಿಂದ ತೆರವಾಗಿರುವ ಹುದ್ದೆಗಳಿಗೆ ಜ.28ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಸಂದರ್ಶನಕ್ಕೆ ಹಾಜರಾಗುವಂತೆ ಕಾಲೇಜು ಪ್ರಾಂಶುಪಾಲ ಉದಯಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಗರದಲ್ಲಿ ಗ್ಯಾಸ್, ಪಡಿತರದಾರರ ಸಭೆ
ಮಂಗಳೂರು: ಗ್ಯಾಸ್ ಮತ್ತು ಪಡಿತರ ಜನತೆಯ ಮೂಲಭೂತ ಅವಶ್ಯಕತೆಯಾಗಿದ್ದು, ಸಾರ್ವಜನಿಕರು ಹಲವಾರು ಗೊಂದಲ ಅನುಭವಿಸುತ್ತಲೇ ಬಂದಿದ್ದಾರೆ. ನಿಗದಿತ ಸಮಯದಲ್ಲಿ ಬುಕಿಂಗ್ ಮಾಡಿದರೂ 20-30 ದಿನಗಳಾದರೂ ಬಳಕೆದಾರರಿಗೆ ಅಡುಗೆ ಅನಿಲ ಸರಬರಾಜಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಪ್ರಜಾ ವಿಕಾಸ ಸೇವಾ ಟ್ರಸ್ಟ್ ಆಶ್ರಯದಲ್ಲಿ ಗ್ಯಾಸ್ ಮತ್ತು ಪಡಿತರ ಬಳಕೆದಾರರ ವೇದಿಕೆಯಿಂದ ಜನಸಂಪರ್ಕ ಸಭೆ 28ರಂದು ಪುರಭವನದಲ್ಲಿ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷ ಧರ್ಮೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಧ್ಯಾಹ್ನ 2.30ಕ್ಕೆ ಸಭೆ ಕರೆಯಲಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಶರಣಬಸಪ್ಪ, ಗ್ರಾಹಕ ವೇದಿಕೆ ನ್ಯಾಯವಾದಿ ಶಶಿರಾಜ್ ಕಾವೂರು, ಇಲಾಖಾ ಅಧಿಕಾರಿಗಳು, ಇತರರು ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ವೀರಪ್ಪ ಮೊಯ್ಲಿಗೆ 14 ಬೇಡಿಕೆಗಳನ್ನು ಸಲ್ಲಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.