ದಕ್ಷಿಣ ಕನ್ನಡ

ರುಡ್ಸೆಟ್ ಒಪ್ಪಂದ ಮುಂದುವರಿಕೆ

Published On :

ಬೆಳ್ತಂಗಡಿ: ರಾಷ್ಟ್ರೀಯ ರುಡ್ಸೆಟ್ ಅಕಾಡೆಮಿಯ ಕಾರ್ಯ ವೈಖರಿಯನ್ನು ಮೆಚ್ಚಿ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯವು ಹಿಂದೆ ಮಾಡಿಕೊಂಡಿದ್ದ ಒಪ್ಪಂದವನ್ನು ಮತ್ತೆ 01.08.2014ರಿಂದ 31.07.2017ರವರೆಗೆ ಮುಂದುವರಿಸುವ ತೀರ್ಮಾನ ಕೈಗೊಂಡಿದೆ.
 ನಿರ್ಧಾರದ ಅಂಗವಾಗಿ ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ನವದೆಹಲಿಯ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಕಚೇರಿಯಲ್ಲಿ ಈ ಕುರಿತು ಸಹಿ ಹಾಕಲಾಯಿತು.
 ಗ್ರಾಮೀಣ ಅಭಿವೃದ್ಧಿ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಮಹತ್ತರ ಕೊಡುಗೆಯನ್ನು ಗಮನಿಸಿ, ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯವು 2008-09ರಲ್ಲಿ ರುಡ್ಸೆಟ್ ಸಂಸ್ಥೆಯನ್ನು ಅನುಕರಣೀಯ ಎಂದು ಘೋಷಿಸಿತ್ತು. ದೇಶದ ಪ್ರತಿ ಜಿಲ್ಲೆಯಲ್ಲಿ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಗಳನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ರುಡ್ಸೆಟ್ ಸಂಸ್ಥೆಗಳ ಮಾದರಿಯಲ್ಲಿ ಸ್ಥಾಪಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ಗಳಿಗೆ ನಿರ್ದೇಶನ ನೀಡಿತ್ತು.
 ದೇಶಾದ್ಯಂತ ಇರುವ ಎಲ್ಲ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಗಳ ತರಬೇತಿಯ ಗುಣಮಟ್ಟ ಏಕರೂಪವಾಗಿ ಕಾಯ್ದುಕೊಳ್ಳುವುದಕ್ಕೆ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯವು ರಾಷ್ಟ್ರೀಯ ರುಡ್ಸೆಟ್ ಅಕಾಡೆಮಿ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ 29.07.2011ರಂದು ಮೂರು ವರ್ಷದ ಮಟ್ಟಿಗೆ ಒಪ್ಪಂದಕ್ಕೆ ಸಹಿ ಮಾಡಿತ್ತು. ಇದೀಗ ಅದನ್ನು ಮತ್ತೆ ಮಂದುವರಿಸಲಾಗಿದೆ.
 ಮಂತ್ರಾಲಯದ ಪರವಾಗಿ ಹೆಚ್ಚುವರಿ ನಿರ್ದೇಶಕ ಟಿ. ವಿಜಯ ಕುಮಾರ್ ಸಹಿ ಮಾಡಿದರು. ಕಾರ್ಯದರ್ಶಿ ಎಲ್.ಸಿ. ಗೋಯಲ್, ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾದ ಎಸ್.ಕೆ. ಜೈನ್, ಸಿಂಡಿಕೇಟ್ ಬ್ಯಾಂಕ್ ಮಹಾಪ್ರಬಂಧಕ ಪ್ರೀತಮ್ ಲಾಲ್, ಕೆನರಾ ಬ್ಯಾಂಕ್ ಮಹಾಪ್ರಬಂಧಕ ಎಸ್.ಎಸ್. ಭಟ್, ಗ್ರಾಮೀಣ ಅಭಿವೃದ್ಧಿ ಮಂತ್ರಾಲಯ ನಿರ್ದೇಶಕ ರೇಣುಕಾ ಕುಮಾರ್, ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕಿರಿಯ ಸಹೋದರ ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ರುಡ್ಸೆಟ್ ಅಕಾಡೆಮಿ ಮುಖ್ಯ ಯೋಜನಾ ಸಮನ್ವಯಾಧಿಕಾರಿ ಕೆ.ಎನ್. ಜನಾರ್ದನ್ ಇದ್ದರು. ರುಡ್ಸೆಟ್ ಮುಖ್ಯ ಯೋಜನಾ ಸಮನ್ವಯಾಧಿಕಾರಿ ಕೆ.ಎನ್. ಜನಾರ್ದನ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.