ಸುಳ್ಯ ಸಿಐ ಪರ ಪ್ರತಿಭಟನೆ
ಸುಳ್ಯ: ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ವಿರುದ್ಧ ದುರ್ನಡತೆ ಆರೋಪ ಹೊರಿಸಿ ಕೆಲವರು ನಡೆಸುತ್ತಿರುವ ಹೋರಾಟ ಸತ್ಯಕ್ಕೆ ದೂರವಾಗಿದ್ದು, ಇಂತಹ ಆರೋಪ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು. ಸುಳ್ಯದ ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘ, ಲಾರಿ ಮಾಲೀಕ- ಚಾಲಕರ ಸಂಘ, ದಲಿತ ಸೇವಾ ಸಮಿತಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಸತೀಶ್ ಅವರನ್ನು ವರ್ಗಾಯಿಸಿದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು. ಬಿಜೆಪಿ ನಾಯಕ ಪಿ.ಕೆ.ಉಮೇಶ್, ಕಾಂಗ್ರೆಸ್ ನಾಯಕ ಮಹಮ್ಮದ್ ಕುಂಞ ಗೂನಡ್ಕ, ರಿಕ್ಷಾ ಯೂನಿಯನ್ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಲಾರಿ ಯೂನಿಯನ್ ಅಧ್ಯಕ್ಷ ದಿನೇಶ್ ಅಡ್ಕಾರ್, ದಲಿತ ಮಹಿಳಾ ವೇದಿಕೆ ಸಂಚಾಲಕಿ ಸರಸ್ವತಿ ಬೊಳಿಯಮಜಲು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

