ಎಐಎಸ್ಎಫ್ ಪ್ರತಿಭಟನೆ
ಹರಪನಹಳ್ಳಿ: ವೃತ್ತಿಪರ ತರಬೇತಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪಟ್ಟಣದಲ್ಲಿ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಐಎಸ್ಎಫ್ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ಸಂಘಟನೆ ತಾಲೂಕು ಸಂಚಾಲಕ ಚಂದ್ರನಾಯ್ಕ ಮಾತನಾಡಿ, ವೃತ್ತಿಪರ ತರಬೇತಿಗಳಾದ ಬಿ.ಇಡಿ, ಡಿ.ಇಡಿ, ಡಿಪ್ಲೋಮ ಹಾಗೂ ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸ್ಥಾಪಿಸುವಂತೆ ಅನೇಕ ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಏನೂ ಪ್ರಯೋಜನವಾಗಿಲ್ಲ. ಈ ಕುರಿತು ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದರು.
ಹಾಸ್ಟೆಲ್ ಸೌಲಭ್ಯದಿಂದ ವಂಚಿತ: ಬಿ.ಇಡಿ ಹಾಗೂ ಡಿ.ಇಡಿ ವಿದ್ಯಾರ್ಥಿಗಳಿಗೆ ನಿಲಯ ಸೌಲಭ್ಯ ಪೂರಕವಾಗುತ್ತಿಲ್ಲ. ಶೈಕ್ಷಣಿಕ ಪ್ರಕ್ರಿಯೆ ಆರಂಭವಾಗುವ ವೇಳೆಗೆ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆ ಮುಗಿದಿರುತ್ತದೆ. ಇದರಿಂದ ಈ ಕೋರ್ಸ್ಗಳಲ್ಲಿ ಅಭ್ಯಾಸ ಮಾಡುತ್ತಿರುವ ಬಡ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅದ್ದರಿಂದ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗಮನಹರಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಿಕೊಡಬೇಕು. ಅಲ್ಲದೇ ಪ್ರತ್ಯೇಕ ಹಾಸ್ಟೆಲ್ ಸ್ಠಾಪಿಸಬೇಕೆಂದು ಆಗ್ರಹಿಸಿದರು.
ಮುಖಂಡರಾದ ಚಂದ್ರಕಾಂತ್, ಎಲ್.ಪಿ. ಶಿವಮೂರ್ತಿ, ಎಚ್. ರಮೇಶ್ನಾಯ್ಕ, ಲಕ್ಷ್ಮಿ, ಮಂಜುಳ, ಜ್ಯೋತಿ, ವಿಜಯಶ್ರೀ, ನಜ್ಮ, ಶೀಲಾ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

