ದಾವಣಗೆರೆ

ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Published On :

ಮೊಳಕಾಲ್ಮುರು: ಗ್ರಾಮೀಣ ಜನರಿಗೆ ಉದ್ಯೋಗ ನೀಡಲು ಸರ್ಕಾರ ರಾಷ್ಟ್ರೀಯ ಉದ್ಯೋಗ ಖಾತರಿ ಜಾರಿ ಮಾಡಿದೆ. ಸಾರ್ವಜನಿಕರು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಇ.ಓ. ಅಂಜನ್ ಕುಮಾರ್ ತಿಳಿಸಿದ್ದಾರೆ.
   ತಾಲೂಕಿನ ಗಡಿ ಗ್ರಾಮವಾದ ವೆಂಕಟಾಪುರ ಗ್ರಾಮದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ದುಡಿಯುವ ಕೈಗಳಿಗೆ ಕೆಲಸ ನೀಡಲು ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿ ಮಾಡಿದ್ದು, ಇದರಿಂದ ಗ್ರಾಮೀಣ ಜನರು ಸಂಬಂಧಿಸಿದ ಗ್ರಾಪಂನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಜಿ ನೀಡಿದ 15 ದಿನಗಳ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಲಿಕಾರರಿಗೆ ಕೆಲಸ ನೀಡಬೇಕೆನ್ನುವುದು ಸರ್ಕಾರದ ನಿಯಮವಾಗಿದೆ.
   ಸಾರ್ವಜನಿಕರು ಇದರ ಯೋಜನೆಯನ್ನು ಬಳಕೆ ಮಾಡಿಕೊಂಡು ವಲಸೆ ಹೋಗದಂತೆ ನಿಮ್ಮ ಗ್ರಾಮದಲ್ಲಿಯೇ ಇದ್ದು, ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನಿರ್ವಹಿಸಿಕೊಳ್ಳಬೇಕೆಂದು ತಿಳಿಸಿದರು.
ಕ್ರಮ ಕೈಗೊಳ್ಳಲಾಗುವುದು: ಈ ಯೋಜನೆಯಲ್ಲಿ ಕೆಲಸ ಮಾಡುವ ಯಂತ್ರಗಳನ್ನು ಬಳಕೆ ಮಾಡಿಕೊಳ್ಳದೇ ಕೇವಲ ಕೂಲಿಕಾರರಿಂದಲೇ ಕೆಲಸ ಮಾಡಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ ಅವರು ತಪ್ಪಿದಲ್ಲಿ ನಿಮ್ಮ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರಭಾರಿ ತಹಸೀಲ್ದಾರ್ ಮಹಮ್ಮದ್ ಖಾಸೀಂ ಮಾತನಾಡಿ, ಇಲಾಖೆಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ, ಶವಸಂಸ್ಕಾರಕ್ಕಾಗಿ ಸಹಾಯಧನ ನೀಡುವಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿದ್ದು, ಸಾರ್ವಜನಿಕರು ದೊರೆಯಬಹುದಾದ ಯೋಜನೆಗಳನ್ನು ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಸಮಾಜಕಲ್ಯಾಣ ಇಲಾಖೆಯ ಅಧಿಕಾರಿ ನಾಗರಾಜ ನಾಯಕ ಇಲಾಖೆಯಲ್ಲಿ ದೊರೆಯಬಹುದಾದ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದರು. ಕೃಷಿ ಇಲಾಖೆಯ ಎಇಓ ರಾಘವೇಂದ್ರ, ಗ್ರಾಪಂ ಅಧ್ಯಕ್ಷ ಆಂಜನೆಯ, ಉಪಾಧ್ಯಕ್ಷೆ ಶಿವಗಂಗಮ್ಮ, ಕಂದಾಯ ಇಲಾಖೆ ನಾಗರಾಜ್, ಕಾರ್ಯದರ್ಶಿ ಹೊನ್ನೂರಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತ್ಯಾಗರಾಜ್ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.