10 ರಂದು ಹುತಾತ್ಮ ಯೋಧರಿಗೆ ನಮನ
ದಾವಣಗೆರೆ: ತೋಳಹುಣಸೆಯ ಶ್ರೀ ಯಲ್ಲಮ್ಮ ಗರಡಿಮನೆ ಆಶ್ರಯದಲ್ಲಿ 63ನೇ ಗಣರಾಜ್ಯೋತ್ಸವ ಪ್ರಯುಕ್ತ ಹುತಾತ್ಮ ಯೋಧರ ಸ್ಮರಣಾರ್ಥ ವೀರಯೋಧರಿಗೆ ನಮನ ಕಾರ್ಯಕ್ರಮವನ್ನು ಫೆ.10 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗರಡಿಮನೆ ಅಧ್ಯಕ್ಷ, ರಾಷ್ಟ್ರೀಯ ಕುಸ್ತಿಪಟು ಪೈಲ್ವಾನ್ ಆರ್. ಸುರೇಶ ನಾಯ್ಕ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀ ಬೀರಲಿಂಗೇಶ್ವರ ಕುಸ್ತಿ ಅಖಾಡದಿಂದ ಬೃಹತ್ ಮೆರವಣಿಗೆ ನಡೆಯಲಿದೆ.
ನುಡಿ ನಮನ ಕಾರ್ಯಕ್ರಮ: ತ್ರಿಶೂಲ್ ಕಲಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ನುಡಿ ನಮನ ಕಾರ್ಯಕ್ರಮದ ಸಾನ್ನಿಧ್ಯವನ್ನು ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ, ಸಿರಿಗೆರೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಶ್ರೀ ಶಿವಮೂರ್ತಿ ಮುರುಘಾ ಶರಣರು, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಹಿಸುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಗಣ್ಯರ ಉಪಸ್ಥಿತಿ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ, ದಾವಣಗೆರೆ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಸ್. ಇಂದುಮತಿ ಸೇರಿದಂತೆ ಸ್ಥಳೀಯ ಜನ ಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ದೇಶಕ್ಕಾಗಿ ವೀರಮರಣವನ್ನಪ್ಪಿದ ಯೋಧರಿಗೆ ಗೌರವಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ಮಾಪಕರಾದ ಅಣಜಿ ನಾಗರಾಜ, ಮೇಕಾ ಮುರಳಿಕೃಷ್ಣ, ಆನಂದ ಅಪ್ಪುಗೋಳ, ಕ್ರಿಕೆಟ್ ಪಟು ವಿನಯ ಕುಮಾರ, ಕುಸ್ತಿಪಟುಗಳಾದ ರಫೀಕ್ ಹೊಳೆ, ಎಂ.ಆರ್. ಪಾಟೀಲ್ ಅವರುಗಳನ್ನು ಸನ್ಮಾನಿಸಲಾಗುವುದು. ಎನ್ಸಿಸಿ, ಸ್ಕೌಟ್ಸ್, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಯುವಕರಿಗೆ ಪ್ರೇರಣೆ: 1982ರಲ್ಲಿ ಸ್ಥಾಪನೆಗೊಂಡ ಶ್ರೀ ಯಲ್ಲಮ್ಮ ಗರಡಿಮನೆಯಲ್ಲಿ ಪಳಗಿದವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟುಗಳಾಗಿ ಹೊರಹೊಮ್ಮಿದ್ದಾರೆ. ಅಲ್ಲದೇ, ಗರಡಿಮನೆ ವಿದ್ಯಾರ್ಥಿಗಳು ಭಾರತೀಯ ಸೇನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಇದು ಇಂದಿನ ಯುವ ಪೀಳಿಗೆಗೆ ಸಹ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗರಡಿಮನೆ ಸಂಸ್ಥಾಪಕ ಗೌರವಾಧ್ಯಕ್ಷ ಪೈಲ್ವಾನ್ ರೇಖ್ಯಾ ನಾಯ್ಕ, ಪ್ರಧಾನ ಕಾರ್ಯದರ್ಶಿ ತುಕಾರಾಮ ಸಿ. ನಾಯ್ಕ, ಆರ್. ಶಿವಾನಂದ, ವೀರೇಶ, ಚಂದ್ರಾನಾಯ್ಕ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

