ಇಂದು ವೀರ ಯೋಧರಿಗೆ ನಮನ
ದಾವಣಗೆರೆ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಸ್ಮರಣಾರ್ಥ ವೀರ ಯೋಧರಿಗೆ ನಮನ ಕಾರ್ಯಕ್ರಮ ಫೆ.10ರಂದು ನಗರದ ತ್ರಿಶೂಲ್ ಕಲಾ ಭವನದಲ್ಲಿ ತೋಳಹುಣಸೆ ಗ್ರಾಮದ ಶ್ರೀ ಯಲ್ಲಮ್ಮ ಗರಡಿ ಮನೆ ಆಶ್ರಯದಲ್ಲಿ ನಡೆಯಲಿದೆ ಎಂದು ಗರಡಿ ಮನೆ ಅಧ್ಯಕ್ಷ, ರಾಷ್ಟ್ರೀಯ ಕುಸ್ತಿಪಟು ಆರ್. ಸುರೇಶ ನಾಯ್ಕ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4.30ಕ್ಕೆ ಲಂಬಾಣಿ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘರಾಜೇಂದ್ರ ಶರಣರು, ಶರಣ ಬಸವಲಿಂಗ ಶಿವಯೋಗಿಗಳು, ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆ ನಿರಂಜನಾನಂದಪುರಿ ಸ್ವಾಮೀಜಿ, ಹರಿ ಹರ ಸಿದ್ದಲಿಂಗೇಶ್ವರ ಸ್ವಾಮೀಜಿ, ರಾಜನಹಳ್ಳಿ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ ಎಂದರು.
ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದು, ದಾವಿವಿ ಕುಲಪತಿ ಡಾ. ಎಸ್. ಇಂದುಮತಿ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ, ಮಾಜಿ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ, ಸಂಸದ ಜಿ.ಎಂ. ಸಿದ್ದೇಶ್ವರ, ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ, ಎಲ್. ಹರಿಖೋಡೆ, ಸಚಿವ ಎಂ.ಪಿ. ರೇಣುಕಾಚಾರ್ಯ, ಮೇಯರ್ ಸುಧಾ ಜಯರುದ್ರೇಶ, ಮಾಜಿ ಶಾಸಕ ಮಹಿಮ ಜೆ. ಪಟೇಲ್, ಕಂದನಕೋವಿ ಬಿ. ರುದ್ರಪ್ಪ, ಬಿ.ಸಿ. ಉಮಾಪತಿ ಇಥರರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು.
ಯೋಧರಿಗೆ ಗೌರವಾರ್ಪಣೆ: ದೇಶಕ್ಕಾರಿ ವೀರ ಮರಣವನ್ನಪ್ಪಿದ ಯೋಧರಿಗೆ ಗೌರವಾರ್ಪಣೆ ಮಾಡಲಾಗುವುದು. ಚಿತ್ರ ನಿರ್ಮಾಪಕ ಅಣಜಿ ನಾಗರಾಜ, ಮೇಕಾ ಮುರಳಿಕೃಷ್ಣ, ಆನಂದ ಅಪ್ಪುಗೋಳ, ರಫೀಕ್ ಹೋಳಿ, ಎಂ.ಆರ್. ಪಾಟೀಲ್ರನ್ನು ಸನ್ಮಾನಿಸಲಾಗುವುದು. ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅವರು ಮನವಿ ಮಾಡಿದರು.
ಯುವ ಪೀಳಿಗೆಗೆ ಆದರ್ಶವಾಗಲಿ: ತೋಳಹುಣಸೆಯಲ್ಲಿ 1982ರಲ್ಲಿ ಸ್ಥಾಪನೆಯಾದ ಯಲ್ಲಮ್ಮ ಗರಡಿಮನೆಯಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳಾಗಿ ಹೊರ ಹೊಮ್ಮಿದವರು ಹೆಚ್ಚಾಗಿದ್ದಾರೆ. ಭಾರತೀಯ ಸೇನೆಯಲ್ಲೂ ಸಾಕಷ್ಟು ಮಂದಿ ಸೇರ್ಪಡೆಯಾಗಿದ್ದಾರೆ. ಇದು ಇಂದಿನ ಯುವ ಪೀಳಿಗೆಗೆ ಆದರ್ಶವಾಗಲಿ ಎಂಬ ಸದುದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ತರಬೇತುದಾರ ಆರ್. ಶಿವಾನಂದ, ಗರಡಿ ಮನೆ ಪ್ರಧಾನ ಕಾರ್ಯದರ್ಶಿ ತುಕಾರಾಂ ಸಿ. ನಾಯ್ಕ, ಶೋಭ್ಯಾನಾಯ್ಕ, ಸಂತೋಷಕುಮಾರ, ರವಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

