ಚಿಗಟೇರಿಗೆ ನೀರು ಪೂರೈಸಲು ಸೂಚನೆ
ದಾವಣಗೆರೆ: ಚಿಗಟೇರಿ ಗ್ರಾಮದಿಂದ 4 ಕಿ.ಮೀ ದೂರದಲ್ಲಿ ಕೊರೆಸಿದ ಕೊಳವೆ ಬಾವಿಯಲ್ಲಿ ಉತ್ತಮ ನೀರು ಲಭ್ಯವಾಗಿದೆ. ರು. 50 ಲಕ್ಷ ವೆಚ್ಚದಲ್ಲಿ ಪೈಪ್ಲೈನ್ ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸುವಂತೆ ಜಿಪಂ ಎಂಜಿನಿಯರಿಂಗ್ ಉಪ ವಿಭಾಗದ ಇಇಗೆ ಸಂಸದ ಜಿ.ಎಂ. ಸಿದ್ದೇಶ್ವರ ಸೂಚಿಸಿದ್ದಾರೆ.
ನಗರದ ತಮ್ಮ ಜನ ಸಂಪರ್ಕ ಕಚೇರಿಯಲ್ಲಿ ಹರಪನಹಳ್ಳಿ ತಾ. ಚಿಗಟೇರಿ ಗ್ರಾಮಸ್ಥರು ನೀರಿನ ಸಮಸ್ಯೆ ತೋಡಿಕೊಂಡ ಹಿನ್ನೆಲೆಯಲ್ಲಿ ಜಿಪಂ ಉಪ ವಿಭಾಗದ ಇಇ ಪ್ರಕಾಶರನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಅವರು, ಚಿಗಟೇರಿ ಗ್ರಾಮಕ್ಕೆ 4 ಕಿ.ಮೀ ದೂರದಲ್ಲಿ ಕೊರೆಸಿದ ಕೊಳವೆಬಾವಿಯಲ್ಲಿ ಉತ್ತಮ ನೀರು ಲಭ್ಯವಾಗಿದೆ. ಪೈಪ್ಲೈನ್ನಲ್ಲಿ ನೀರೊದಗಿಸಲು ಕ್ರಿಯಾಯೋಜನೆ ರೂಪಿಸಿ ಎಂದರು.
ಒಕ್ಕೊರಲ ಒತ್ತಾಯ: ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಗ್ರಾಮಸ್ಥರು 4 ಕಿ.ಮೀ. ಪೈಪ್ಲೈನ್ ಅಳವಡಿಕೆಗೆ ಹೆಚ್ಚಿನ ಅನುದಾನದಿಂದಾಗಿ ಕಾಮಗಾರಿಗೆ ಸ್ವಲ್ಪ ವಿಳಂಬವಾಗಿದೆ. ತಾತ್ಕಾಲಿಕ ವ್ಯವಸ್ಥೆಯಿಂದ ಸದ್ಯಕ್ಕೆ ನೀರು ಲಭ್ಯವಾಗುತ್ತಿದೆ. ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದಾಗಿ ಒಕ್ಕೊರಲನಿಂದ ಸಂಸದರನ್ನು ಗ್ರಾಮಸ್ಥರು ಒತ್ತಾಯಿಸಿದರು.
ಜಿಪಂ ಎಂಜಿಯನಿರಿಂಗ್ ಉಪ ವಿಭಾಗದ ಇಇ ಪ್ರಕಾಶ್ರನ್ನು ಸಂಪರ್ಕಿಸಿದ ಸಿದ್ದೇಶ್ವರ, ಪೈಪ್ಲೈನ್ ಅಳವಡಿಕೆಗೆ ಅಗತ್ಯ ರು. 50 ಲಕ್ಷ ಅನುದಾನವನ್ನು ಮುಂಬರುವ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆ ಮಾಡಿ, ಆದಷ್ಟು ಬೇಗನೆ ಚಿಗಟೇರಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು.
ಗ್ರಾಮಸ್ಥರಿಗೆ ಭರವಸೆ: ಜಗಳೂರು ತಾ. ಕ್ಯಾಸೇನಹಳ್ಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡವಿದ್ದರೂ, ಪಶು ಆಸ್ಪತ್ರೆ ಮಂಜೂರಾಗಿಲ್ಲ. ತಕ್ಷಣ ಗ್ರಾಮಕ್ಕೆ ಪಶು ಚಿಕಿತ್ಸಾಲಯ ಮಂಜೂರು ಮಾಡಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಲಾಯಿತು. ಹರಪನಹಳ್ಳಿ ತಾ. ಹುಣಸಿಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ರು. 4 ಲಕ್ಷ, ಬಿಕ್ಕಿಕಟ್ಟೆಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಲು ರು. 1.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಸಂಸದ ಜಿ.ಎಂ. ಸಿದ್ದೇಶ್ವರ್ ಆಯಾ ಗ್ರಾಮಸ್ಥರಿಗೆ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

