20 ರಂದು ರಾಷ್ಟ್ರ ಮಟ್ಟದ ಮುಷ್ಕರ
ದಾವಣಗೆರೆ: ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯುವ ಜೊತೆಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫೆ.20ರಿಂದ ಎರಡು ದಿನಗಳ ಕಾಲ ದೇಶಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ರಾಜ್ಯ ಕಾರ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ, ಕಾರ್ಮಿಕರ ವಿರೋಧಿ ನೀತಿಗಳನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ಎರಡು ದಿನಗಳ ಮುಷ್ಕರ ಸಂಘಟಿಸಲಾಗಿದೆ ಎಂದರು. ಕಾರ್ಮಿಕ ಮುಖಂಡರಾದ ಕೆ.ಎಲ್. ಭಟ್, ಆರ್.ಎಸ್. ತಿಪ್ಪೇಸ್ವಾಮಿ, ಆವರಗೆರೆ ಚಂದ್ರು, ಆನಂದರಾಜ, ಆವರಗೆರೆ ಎಚ್.ಜಿ. ಉಮೇಶ, ಷಣ್ಮುಖಪ್ಪ ಇತರರು ಇದ್ದರು.
ಎಲ್ಲಾ ವಾರ್ಡ್ಗಳಿಗೂ ಕೆಜೆಪಿ ಸ್ಪರ್ಧೆ
ಹರಪನಹಳ್ಳಿ: ತಾಲೂಕಿನಲ್ಲಿ ರು.5 ಸಾವಿರ ಕರ್ನಾಟಕ ಜನತಾ ಪಕ್ಷದ ಸದಸ್ಯತ್ವ ನೋಂದಾಹಿಸುವ ಗುರಿ ಹೊಂದಲಾಗಿದೆ. ಈಗಾಗಲೇ 5 ಸಾವಿರ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ದಾವಣಗೆರೆ ಜಿಲ್ಲಾ ಕೆಜೆಪಿ ಸಂಚಾಲಕ ಬಿ.ಎಸ್. ಜಗದೀಶ ತಿಳಿಸಿದ್ದಾರೆ.
ಅವರು ಪಟ್ಟಣದ ಪಿಕಾರ್ಡ್ ಬ್ಯಾಂಕ್ ವೃತ್ತದಲ್ಲಿ ಇರುವ ಕೆಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರಸಭೆ ಚುನಾವಣೆಗೆ ಸಿದ್ಧತೆ ನಡೆದಿದೆ. ಎಲ್ಲಾ 27 ವಾರ್ಡ್ಗಳಿಗೂ ಪಕ್ಷದಿಂದ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

