ಇಂದು ಶಾಸಕರಿಂದ ಅಹವಾಲು ಸ್ವೀಕಾರ
ಹರಪನಹಳ್ಳಿ: ಪಟ್ಟಣದ ಆಚಾರ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕ ಜಿ.ಕರುಣಾಕರ ರೆಡ್ಡಿ ಅವರಿಂದ ಫೆ.19 ರಂದು ಬೆ. 10.30ಕ್ಕೆ ಸಾರ್ವಜನಿಕರ ಕುಂದು -ಕೊರತೆ ವಿಚಾರಿಸಿ ಅಹವಾಲು ಸ್ವೀಕರಿಸುವರು. ಇದಕ್ಕೂ ಪೂರ್ವದಲ್ಲಿ ಪುರಸಭಾ ಚುನಾವಣೆಯ ಪೂರ್ವ ಸಿದ್ಧತಾ ಸಭೆ ನಡೆಸುವರು ನಂತರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವೀರಭದ್ರೇಶ್ವರ ರಥೋತ್ಸವ ಇಂದು
ಹರಪನಹಳ್ಳಿ: ಇಲ್ಲಿಗೆ ಸಮೀಪದ ಮಾನ್ಯರ ಮಸಲವಾಡ ಗ್ರಾಮದಲ್ಲಿ ಫೆ.19ರಂದು ಮಂಗಳವಾರ ಸಂಜೆ 5 ಗಂಟೆಗೆ ವೀರಭದ್ರೇಶ್ವರ ರಥೋತ್ಸವ ಜರುಗಲಿದೆ. ಫೆ.20ರಂದು ಬುಧವಾರ ಬೆಳಿಗ್ಗೆ ಅಗ್ನಿ ಕುಂಡ ಹಾಯುವುದು ಹಾಗೂ ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ಇಂದು ಬಿಜೆಪಿ ಕಾರ್ಯಕರ್ತರ ಸಭೆ
ಚನ್ನಗಿರಿ: ತಾಲೂಕು ಬಿಜೆಪಿ ವತಿಯಿಂದ ಚನ್ನಗಿರಿ ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಫೆಬ್ರವರಿ 19ರಂದು ಇಲ್ಲಿನ ರಾಘವೇದ್ರ ಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ. ತಾಲೂಕು ಬಿಜೆಪಿ ಅಧ್ಯಕ್ಷ ವಡ್ನಾಳ್ ರುದ್ರಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಚುನಾವಣೆಯ ಬಗ್ಗೆ ಚರ್ಚಿಸಿ ಸ್ಪರ್ಧಿಸುವ ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡಲಾಗುವುದು. ಸಭೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಸಿದ್ದನಗೌಡ, ಮುಖ್ಯ ಸಚೇತಕ ಡಾ. ಶಿವಯೋಗಿ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಲ್ಲೇಶ್ ಭಾಗವಹಿಸಲಿದ್ದಾರೆ.
ಚನ್ನಗಿರಿ ಪಪಂ
ಚನ್ನಗಿರಿ: ಚನ್ನಗಿರಿ ಪಟ್ಟಣ ಪಂಚಾಯಿತಿಯ ಚುನಾವಣೆಗೆ 16ನೇ ತಾರೀಖಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು ಪಟ್ಟಣದಲ್ಲಿ ಒಟ್ಟು 19ವಾರ್ಡ್ಗಳಿದ್ದು 19 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ತಹಸೀಲ್ದಾರ್ ಎಚ್.ಎಂ.ರೇವಣಸಿದ್ದಪ್ಪ ತಿಳಿಸಿದ್ದಾರೆ. ಪಟ್ಟಣದಲ್ಲಿ 7797ಪುರುಷ ಮತದಾರರಿದ್ದು, 7539ಮಹಿಳಾ ಮತದಾರರು ಸೇರಿದಂತೆ ಒಟ್ಟು 15,336ಜನ ಮತದಾರರನ್ನು ಒಳಗೊಂಡಿದೆ ಎಂದು ತಿಳಿಸಿದರು.
ನಾಮಪತ್ರ: ನಾಮಪತ್ರ ಸಲ್ಲಿಕೆಗೆ ಎರಡು ಭಾಗಗಳಲ್ಲಿ ವ್ಯವಸ್ಥೆ ಮಾಡಿದ್ದು ಒಂದರಿಂದ 10ನೇ ವಾರ್ಡ್ ತನಕ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯನ್ನು ನಿಗದಿ ಪಡಿಸಲಾಗಿದೆ. 11ರಿಂದಾ 19ನೇ ವಾರ್ಡ್ ತನಕ ತಾಲೂಕು ಪಂಚಾಯಿತಿ ಕಚೇರಿಯನ್ನು ನಿಗದಿ ಪಡಿಸಲಾಗಿದೆ.
ನಾಮ ಪತ್ರ ಸಲ್ಲಿಕೆಗೆ 23 ಕೊನೆಯ ದಿನವಾಗಿದ್ದು, ನಾಮಪತ್ರಗಳನ್ನು ವಾಪಸ್ ಪಡೆಯಲು ಫೆ. 27ಕೊನೆ ದಿನವಾಗಿರುತ್ತದೆ. ಮತದಾನವು ಮಾ.7ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

