ವಿಶ್ವಶಾಂತಿಗಾಗಿ ಇಂದು ಗುಗ್ಗಳ
ದಾವಣಗೆರೆ: ನಗರದ ಹುಬ್ಬಳ್ಳಿ ಚೌಡಪ್ಪನ ಗಲ್ಲಿಯ ವೀರಭದ್ರೇಶ್ವರ ಸ್ವಾಮಿಯ ಶಿಲಾಮೂರ್ತಿಯ 13ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಶಾಂತಿಗಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಕಾರ್ಯಕ್ರಮ 25ರಂದು ನಡೆಯಲಿದೆ. ಅಂದು ಬೆಳಿಗ್ಗೆ 8.30ಕ್ಕೆ ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗುರುಬಾಯಮ್ಮ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಪಾಲಿಕೆ ಸಹಾಯಕ ಅಭಿಯಂತರ ಬಿರಾದಾರ, ಅನ್ನದಾನೀಶ್ವರ ಮಠದ ಅಡಿವೆಪ್ಪ, ಬಸವರಾಜ, ಸಮಿತಿಯ ಲಿಂಗರಾಜ, ಕರಿಬಸಪ್ಪ, ಹಿರಿಯ ಪತ್ರಕರ್ತ ವೀರಪ್ಪ ಎಂ. ಭಾವಿ ಪಾಲ್ಗೊಳ್ಳಲಿದ್ದಾರೆ.
ಇಂದು ಶಿಬಿರ
ದಾವಣಗೆರೆ: ಎ.ಆರ್.ಎಂ. ಪ್ರಥಮ ದರ್ಜೆ ಕಾಲೇಜಿನಲ್ಲಿ 25ರಂದು ವ್ಯಕಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 10.30ಕ್ಕೆ ಕಾಲೇಜು ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕಕುಮಾರ ವಿ. ಪಾಳೇದ ಅಧ್ಯಕ್ಷತೆಯಲ್ಲಿ ಜೆಸಿಐ ವ್ಯಕ್ತಿತ್ವ ತರಬೇತುದಾರ ರಾಣೆಬೆನ್ನೂರಿನ ಪ್ರೊ. ನಿಂಗನಗೌಡ ಕತಗಿ ಇತರರು ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

