ದಾವಣಗೆರೆ

ವೀರಶೈವ ಹಿಂದು ಧರ್ಮದ ಭಾಗವಲ್ಲ

Published On :

ದಾವಣಗೆರೆ: ವೀರಶೈವ ಧರ್ಮ ಹಿಂದು ಧರ್ಮವಲ್ಲವೆಂಬುದಾಗಿ ಸುಪ್ರೀಂ ಕೋರ್ಟ್ ಹಿಂದೆಯೇ ಹೇಳಿದ್ದರೂ, ಮತ್ತೆ ಅದನ್ನು ಹಿಂದು ಧರ್ಮದ ಒಂದು ಭಾಗ ಎಂಬುದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ ಆಕ್ಷೇಪಿಸಿದರು.
ನಗರದ ಅಭಿನವ ರೇಣುಕಾ ಮಂದಿರದಲ್ಲಿ ಭಾನುವಾರ ಜಿಲ್ಲಾ ಶಿವಸಿಂಪಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವೀರಶೈವ ಧರ್ಮವನ್ನು ಹಿಂದು ಧರ್ಮದ ಒಂದು ಭಾಗ ಎಂಬುದಾಗಿ ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದರು.
ಸಮಾಜ ಬಾಂಧವರಿಗಾಗುವ ಅನ್ಯಾಯದ ವಿರುದ್ಧ ಹೋರಾಡಲು ಸ್ಥಾಪಿತವಾದ ಸಂಸ್ಥೆ. ವೀರಶೈವ ಬಾಂಧವರ ಸಮಸ್ಯೆಗೆ ಧ್ವನಿಯಾಗಿ ಮಹಸಭಾ ಕಾರ್ಯ ನಿರ್ವಹಿಸುತ್ತದೆ ಎಂದು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಶಿವಶಂಕರ್ , ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಬಸವರಾಜ ಮಾತನಾಡಿದರು. ಹೆಬ್ಬಾಳ್ ವಿರಕ್ತ ಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯವನ್ನು, ಹೇಮಣ್ಣ ಜವಳಿ ಅಧ್ಯಕ್ಷತೆ ವಹಿಸಿದ್ದರು. ಡಾ. ಮಲ್ಲಿಕಾರ್ಜುನ ಜವಳಿ, ಜಗದೀಶ, ಎಂ.ಕೆ. ಬಕ್ಕಪ್ಪ, ಮೂರ್ಕಲ್ ಜಯಣ್ಣ, ಮಂಜುನಾಥ ಜವಳಿ ಮತ್ತಿತರರು ಇದ್ದರು.
ಮಹಾಸಭಾ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದ ಚಿಂದೋಡಿ ಬಂಗಾರೇಶ್‌ರನ್ನು ಸಮಾಜದಿಂದ ಸನ್ಮಾನಿಸಲಾಯಿತು. ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಪ್ರೋತ್ಸಾಹಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.