ದಾವಣಗೆರೆ

ಇಂದು ಸಾಮೂಹಿಕ ವಿವಾಹ

Published On :

ಚನ್ನಗಿರಿ: ತಾಲೂಕಿನ ರಾಜಗೊಂಡನಹಳ್ಳಿಯಲ್ಲಿ ಮಾತಾ ಬನಶಂಕರಿ ದೇವಿಯ ನೂತನ ದೇವಸ್ಥಾನ ಉದ್ಘಾಟನೆ, ವಿಗ್ರಹ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಸರ್ವ ಶರಣರ ಸಮ್ಮೇಳನವು ಮಾರ್ಚ್ 8ರವರೆಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಬಸವರಾಜಪ್ಪ ತಿಳಿಸಿದ್ದಾರೆ.
 ದಿನಾಂಕ 7ರಂದು ದೇವಾಲಯದ ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಮಾರ್ಚ್ 8ರಂದು ಬೆಳಗ್ಗೆ  5-40ಕ್ಕೆ ದೇವಿಯ ಪ್ರಾಣ ಪ್ರತಿಷ್ಠೆ, ನಿರಿಕ್ಷಣಾ ದಶದಾನ, ಪ್ರತಿಷ್ಠಾ ಹೋಮ, ಕಲಾ ಹೋಮ, ಮಹಾ ಪೂರ್ಣಾಹುತಿ ನಡೆದು 9-00ಗಂಟೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
  ಬೆಳಗ್ಗೆ 11-00 ಗಂಟೆಗೆ ಸರ್ವ ಶರಣರ ಸಮ್ಮೇಳನ ನಡೆಯಲಿದ್ದು, ಸಾನ್ನಿದ್ಯವನ್ನು ಸಿರಿಗೆರೆ ಬೃಹನ್ಮಠದ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ವಹಿಸುವರು.
  ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್, ಸಂಸದ ಆಯನೂರು ಮಂಜುನಾಥ್, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಸಮಾಜ ಸೇವಕ ಡಾ.ಎ. ಬಸವಣ್ಣಯ್ಯ ಇತರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.