ದಾವಣಗೆರೆ

9 ರಂದು ವಿಚಾರ ಸಂಕಿರಣ

Published On :

ಕ.ಪ್ರ.ವಾರ್ತೆ, ದಾವಣಗೆರೆ, ಮಾ.6
ಭ್ರಷ್ಟಾಚಾರ ಪಿಡುಗು ನಿಯಂತ್ರಿಸುವಲ್ಲಿ ನಾಗರಿಕ ಸಮಾಜದ ಸಕ್ರಿಯ ಪಾಲ್ಗೊಳ್ಳುವಿಕೆಯ ಅಗತ್ಯತ ಕುರಿತು ಯುಜಿಸಿ ಪ್ರಾಯೋಜಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಮಾ.9ರಂದು ನಗರದ ಎವಿಕೆ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ನೇತೃತ್ವದಲ್ಲಿ ನಡೆಯಲಿದೆ.
 ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥಪ್ರೊ. ಸಿ.ಎಚ್. ಮುರಿಗೇಂದ್ರಪ್ಪ, ಅಂದು ಬೆಳಗ್ಗೆ 10ಕ್ಕೆ ಪ್ರೊ. ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ವಿಚಾರ ಸಂಕಿರಣ ಉದ್ಘಾಟಿಸುವರು ಎಂದರು.
ಸಮಕಾಲೀನ ಚರ್ಚೆ: ಬೆಳಗ್ಗೆ 11.30ಕ್ಕೆ ಎಆರ್‌ಜಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ. ಜಯಪ್ಪ ಅಧ್ಯಕ್ಷತೆಯಲ್ಲಿ ನಾಗರಿಕ ಸಮಾಜ ಮತ್ತು ಪ್ರಜಾಪ್ರಭುತ್ವದ ಮೇಲೆ ಸಮಕಾಲೀನ ಚರ್ಚೆ ವಿಷಯದ ಬಗ್ಗೆ ಮೈವಿವಿ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ರಾಜಾರಾಂ ತೋಳ್ಪಾಡಿ ಉಪನ್ಯಾಸ ನೀಡುವರು. ಚನ್ನಗಿರಿ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಆರ್.ಜಿ. ಚಿದಾನಂದ ಕಾರ್ಯಕಲಾಪ ಕುರಿತು ಮಾತನಾಡುವರು ಎಂದು ಅವರು ಹೇಳಿದರು.
  ಸಂಜೆ 4.30ಕ್ಕೆ ಕಾನೂನು ತಜ್ಞ ಪ್ರೊ. ಎಸ್.ಎಚ್. ಪಟೇಲ್ ಸಮಾರೋಪ ಭಾಷಣ ಮಾಡಲಿದ್ದು,
 ಪ್ರಾಚಾರ್ಯ ಪ್ರೊ. ಕೆ.ಎಸ್. ಹನುಮಂತಪ್ಪ ಅಧ್ಯಕ್ಷತೆ ವಹಿಸುವರು. ಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ, ಆಡಳಿತಾತ್ಮಕ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ, ಪ್ರೊ. ಸಿ.ಎಚ್. ಮುರಿಗೇಂದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಮಾಹಿತಿ ನೀಡಿದರು.
 ಎವಿಕೆ ಕಾಲೇಜು ಪ್ರಾಚಾರ್ಯ ಪ್ರೊ. ಕೆ.ಎಸ್. ಹನುಮಂತಪ್ಪ, ಪ್ರಾಧ್ಯಾಪಕ ಪ್ರೊ. ಮಲ್ಲಿಕಾರ್ಜುನ ಹಲಸಂಗಿ, ಡಾ. ಪಾಲಾಕ್ಷ, ಗಣೇಶಪ್ಪ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.