ಹರಿಹರ ಹತ್ತಿರ ಅಪಘಾತ: ಬೆಂಗಳೂರಿನ ಮೂವರ ಸಾವು
ಕನ್ನಡಪ್ರಭ ವಾರ್ತೆ ಹರಿಹರ ಮಾ.29
ಮರಳು ಸಾಗಿಸುತ್ತಿದ್ದ ಲಾರಿ ಹಾಗೂ ಬಜಾಜ್ ಟೆಂಪೋ ಟ್ರಾವೆಲರ್ ಮಧ್ಯೆ ಗುರುವಾರ ತಡರಾತ್ರಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು 11 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಂ.4 ಬೈಪಾಸ್ ಹರಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಗಂಗಣ್ಣ (53) ಮಾರತಹಳ್ಳಿ ನಿವಾಸಿಗಳಾದ ವೆಂಕಟೇಶ್ (46) ಹಾಗೂ ಚಂದ್ರು (40) ಅಪಘಾತದಲ್ಲಿ ಮೃತಪಟ್ಟವರು.
ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆಯ 14 ಕಾರ್ಮಿಕರು, ಟೆಂಪೋ ಟ್ರಾವೆಲರ್ನಲ್ಲಿ ಗೋವಾ ಪ್ರವಾಸಕ್ಕೆ ಹೊರಟಿದ್ದರು. ಕುಮಾರ ಪಟ್ಟಣದಿಂದ ಬೆಂಗಳೂರಿಗೆ ಮರಳು ಸಾಗಿಸುತ್ತಿದ್ದ 10 ಗಾಲಿಗಳ ಭಾರಿ ವಾಹನ ಎದುರಿನಿಂದ ಬಂದು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ದಾವಣಗೆರೆ ಸಿಜೆ ಆಸ್ಪತ್ರೆಗೆ ಸಾಗಿಸಿದರು. ಗಾಯಗೊಂಡ 11 ಪ್ರಯಾಣಿಕರಲ್ಲಿ ಶರವಣ ಮತ್ತು ಮಾರುತಿ ಪ್ರಜ್ಞಾಹೀನರಾಗಿದ್ದು, ಆರೋಗ್ಯ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಲಾಭೂರಾಂ, ಹೆಚ್ಚುವರಿ ಎಸ್ಪಿ ಬಿ.ಟಿ. ಚೌಹಾಣ್, ಡಿವೈಎಸ್ಪಿ ಡಿ.ಕೆ. ಕವಳಪ್ಪ ಭೇಟಿ ನೀಡಿದ್ದರು. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ ಎಂದು ಸಿಪಿಐ ಯು.ಹೆಚ್. ಸಾತೇನಹಳ್ಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

