ದಾವಣಗೆರೆ

80 ಟ್ರ್ಯಾಕ್ಟರ್ ಮರಳು ವಶ

Published On :

ಹರಪನಹಳ್ಳಿ: ತಾಲೂಕಿನ ಕಂಚಿಕೇರಿಯಲ್ಲಿ ಕೆರೆಯಿಂಕ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 80 ಟ್ರ್ಯಾಕ್ಟರ್ ಮರಳನ್ನು ಕಂದಾಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೋಮವಾರ ಜಪ್ತು ಮಾಡಿದ್ದಾರೆ. ಗ್ರಾಮದ ಅಲ್ಲಲ್ಲಿ ಮರಳು ಸಂಗ್ರಹಿಸಲಾಗಿತ್ತು. ಅಧಿಕಾರಿಗಳು ಸ್ಥಳೀಯ ಪಶು ಇಲಾಖೆಯ ಕಚೇರಿ ಹಿಂಭಾಗ ಒಂದೇ ಕಡೆ ಮರಳು ದಾಸ್ತಾನು ಮಾಡಿದ್ದಾರೆ. ಮರಳನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಮರಳಿನ ಮಾಲೀಕರು ಮನೆ ಕಟ್ಟಲು ತಂದಿದ್ದೇವೆ ಎಂದು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ  ಅಧಿಕಾರಿಗಳು ಏನೇ ಆಗಲಿ ಅಕ್ರಮವಾಗಿ ಸಂಗ್ರಹಿಸುವ ಹಾಗಿಲ್ಲ ಎಂದು ಕಾನೂನು ತಿಳಿವಳಿಕೆ ಜೊತೆಗೆ ಎಚ್ಚರಿಕೆ ನೀಡಿದ್ದಾರೆ. ಈಗ ಒಂದೇ ಕಡೆ ಸಂಗ್ರಹ ಮಾಡಲಾದ ಮರಳಿಗೆ ಪೊಲೀಸ್ ಕಾವಲು ಹಾಕಲಾಗಿದ್ದು, ಶೀಘ್ರದಲ್ಲಿಯೇ ಸರ್ಕಾರದ ನಿಯಮದಂತೆ ಹರಾಜು ಹಾಕಲಾಗುವುದು ಎಂದು ತಹಸೀಲ್ದಾರ ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮಲ್ಲಿಕಾರ್ಜುನ ಹಾಗೂ ಇತರರು ದಾಳಿ ತಂಡದಲ್ಲಿ ಇದ್ದರು. ತಹಸೀಲ್ದಾರ್ ಎಂ.ಆರ್. ನಾಗರಾಜ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.