ಗ್ರಾಪಂ ನೌಕರರ ಧರಣಿ ಆರಂಭ
ಜಗಳೂರು: ಸರ್ಕಾರ ನಿಗದಿಪಡಿಸಿದ ವೇತನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ಗ್ರಾಪಂ ನೌಕರರು ಇಲ್ಲಿನ ತಾಪಂ ಕಚೇರಿ ಎದುರು ಗುರುವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ತಾಲೂಕು ಕೇಂದ್ರದ ಪ್ರಮುಖ ಮಾರ್ಗಗಳ ಮೂಲಕ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ತಾಲೂಕು ಪಂಚಾಯಿತಿ ಕಚೇರಿ ತಲುಪಿ, ಅನಿರ್ಧಿಷ್ಟಾವದಿ ಧರಣಿ ನಡೆಸಿದರು.
ಸಂಘದ ಗೌರವಾಧ್ಯಕ್ಷ ಆರ್. ಓಬಳೇಶ್ ಮಾತನಾಡಿ, ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುವ ಬಿಲ್ ಕಲೆಕ್ಟರ್, ಪಂಪ್ ಆಪರೇಟರ್, ವಾಟರ್ಮನ್, ಜವಾನರು, ಕಸ ಗುಡಿಸುವವರಿಗೆ ಸರ್ಕಾರ ನಿಗದಿಪಡಿಸಿದಷ್ಟೇ ವೇತನ ನೀಡಬೇಕು. ಬಾಕಿ ಉಳಿಸಿಕೊಂಡ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಹಾಗೂ 5 ವರ್ಷ ಸೇವೆ ಸಲ್ಲಿಸಿದ ಪಂಪ್ ಆಪರೇಟರ್ಗಳಿಗೆ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡು ವಂತೆ ಸರ್ಕಾರ 2008ರಲ್ಲೇ ಆದೇಶ ಹೊರಡಿಸಲಾಗಿದೆ. ಆದರೆ, ಈವರೆಗೆ ಅದನ್ನು ಜಾರಿಗೊಳಿಸದೆ, ನೇರ ನೇಮಕಾತಿಗೆ ಕೆಲವು ಗ್ರಾಪಂಗಳು ಮುಂದಾಗಿರುವುದು ಸರಿಯಲ್ಲ. ಈ ಅಕ್ರಮ ತಡೆಗಟ್ಟಲು ಸಂಬಂಧಿಸಿದ ಪಿಡಿಒ, ಕಾರ್ಯದರ್ಶಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಆದೇಶ ಉಲ್ಲಂಘಿಸುವ ಹಾಗೂ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಸಂಘದ ಪ್ರಮುಖ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಸರ್ಕಾರ ನಮ್ಮ ಬೇಡಿಕೆ ಸ್ಪಂದಿಸುವವರೆಗೂ ಅನಿರ್ಧಿಷ್ಟಾವದಿವರೆಗೆ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸರ್ಕಾರ ಇನ್ನಾದರೂ ಗ್ರಾಪಂ ನೌಕರರ ವಿಚಾರದಲ್ಲಿ ಮಾನವೀಯತೆಯಿಂದ ಸ್ಪಂದಿಸಬೇಕು. ಕ್ಷೇತ್ರದ ಶಾಸಕರು ಸಹ ಈ ವಿಚಾರದ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.
ಸಂಘದ ತಾಲೂಕು ಅಧ್ಯಕ್ಷ ಟಿ.ಮಹಾಂತೇಶ, ಉಪಾಧ್ಯಕ್ಷ ಯಶವಂತಪ್ಪ, ಕಾರ್ಯದರ್ಶಿ ರಾಜಕುಮಾರ, ಖಜಾಂಚಿ ಶಿವಣ್ಣ, ಸದಸ್ಯರಾದ ಮಹಾಂತೇಶ, ಶ್ರೀನಿವಾಸ, ಮಂಜಣ್ಣ, ಮುನಿಯಪ್ಪ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

