ದಾವಣಗೆರೆ

ಚಾಲನಾ ಪರವಾನಗಿ ಶಿಬಿರ

Published On :

ಹರಪನಹಳ್ಳಿ: 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ  ಎನ್‌ಎಸ್‌ಯುಐ ಸಂಘಟನೆಯಿಂದ ಉಚಿತವಾಗಿ ಚಾಲನಾ ಪರವಾನಗಿ ಪಡೆದುಕೊಳ್ಳಲು ಆರ್‌ಟಿಒದಿಂದ ತಾಲೂಕಿನಲ್ಲಿ ಶೀಘ್ರ ಚಾಲನಾ ಪರವಾನಗಿ ಶಿಬಿರ ಆಯೋಜಿಸಲಾಗುವುದು. ಈ ಕುರಿತು ಮಾಹಿತಿ ನೀಡಿರುವ ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ಪಿ. ಶಿವಕುಮಾರ ನಾಯ್ಕ, ಹೆಸರು ನೋಂದಣಿಯಾದ ಬಳಿಕ ಶಿಬಿರ ನಡೆಯುವ ಸ್ಥಳ ಮತ್ತು ದಿನಾಂಕ ತಿಳಿಸಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರ ಚಾಲನಾ ಪರವಾನಗಿ ಶುಲ್ಕವನ್ನು ಭರಿಸಲು ಶಾಸಕ ಎಂ.ಪಿ. ರವೀಂದ್ರ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಶಿಬಿರಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ. ಹಾಲೇಶ್, ಪುರಸಭಾ ಮಾಜಿ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಎಪಿಎಂಸಿ ನಿರ್ದೆಶಕ ಕೆ.ಎಂ. ಬಸವರಾಜಯ್ಯ, ಪುರಸಭಾ ನಾಮ ನಿರ್ದೆಶಕ ಸದಸ್ಯ ಗೊಂಗಡಿ ನಾಗರಾಜ, ಯುವ ಮುಖಂಡ ಕೋಡಿಹಳ್ಳಿ ಭೀಮಪ್ಪ ಅವರು ಶಿಬಿರಕ್ಕೆ ಸಹಕಾರ ನೀಡಲು ಮುಂದೆ ಬಂದಿದ್ದಾರೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9740589617, 7353722609 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಡಪದ ಅಪ್ಪಣ್ಣ ಸ್ಮರಣೋತ್ಸವ ಇಂದು
ಚನ್ನಗಿರಿ: ತಾಲೂಕಿನ ಪಾಂಡೂಮಟ್ಟಿ ಗ್ರಾಮದ ವಿರಕ್ತಮಠದಲ್ಲಿ ಬಸವಚೇತನದ ಶರಣ ಹಡಪದ ಅಪ್ಪಣ್ಣನವರ ಸ್ಮರಣೋತ್ಸವ, 758ನೇ ಮಾಸಿಕ ಶಿವಾನುಭವ ಕಾರ್ಯಕ್ರಮವು ಜುಲೈ 19ರಂದು ಶನಿವಾರ ಸಂಜೆ ಶ್ರೀಮಠದ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಮಾರಂಭದ ಸಾನ್ನಿಧ್ಯವನ್ನು ಶ್ರೀಮಠದ ಶ್ರೀಗುರುಬಸವ ಮಹಾಸ್ವಾಮೀಜಿ ವಹಿಸುವರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಶಿದರ್, ದಾವಣಗೆರೆಯ ಚೈತನ್ಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪ್ರತಿಭಾ, ಚಿಂತಕ ಬಿ. ದೇವರಾಜ್ ಭಾಗವಹಿಸುಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.