ಗೃಹ ಸಚಿವರೇ ರಾಜಿನಾಮೆ ನೀಡಿ
ಹರಿಹರ: ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಮತ್ತು ಕಾನೂನು ವೈಫಲ್ಯದಿಂದ ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಎಬಿವಿಪಿ ತಾಲೂಕು ಘಟಕ ಹಾಗೂ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಡಿಆರ್ ಎಂ. ಕಾಲೇಜು ಆವರಣದಿಂದ ಪ್ರಾರಂಭವಾದ ಪ್ರತಿಭಟನೆಯಲ್ಲಿ ಹೈಸ್ಕೂಲ್ ಬಡಾವಣೆ ನಾಲ್ಕನೇ ಮುಖ್ಯರಸ್ತೆ, ಪಕ್ಕೀರಸ್ವಾಮಿಮಠ, ಶಿವಮೊಗ್ಗ ರಸ್ತೆ ಮೂಲಕ ತಾಲೂಕು ಕಚೇರಿಗೆ ತೆರಳಿ ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಕಾನೂನುಕ್ರಮ ಜರುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿ ತಹಸೀಲ್ದಾರ್ ಟಿ. ನಜ್ಮಾ ಅವರಿಗೆ ಮನವಿ ಸಲ್ಲಿಸಿದರು.
ಸೂಕ್ತ ಕ್ರಮ ಅಗತ್ಯ: ಎಬಿವಿಪಿ ತಾಲೂಕು ಘಟಕದ ಕಾರ್ಯದರ್ಶಿ ವೀರೇಶ ಬಸವರಾಜ ಅಜ್ಜಣ್ಣನವರ ಮಾತನಾಡಿ, ಕಳೆದ ಎರಡು ವಾರಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತ್ಯಾಚಾರ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿದೆ ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಮಂಗಳಾ ಮಾತನಾಡಿ, ಪ್ರಸ್ತುತ ಕಾನೂನಿನಲ್ಲಿ ಅತ್ಯಾಚಾರಿಗಳಿಗೆ ನಿಗದಿಪಡಿಸಿರುವ ಶಿಕ್ಷೆಯ ಪ್ರಮಾಣ ಕಡಿಮೆ ಇದೆ ಎಂದು ವಿಷಾದ ವ್ಯಕ್ತಪಡಿಸಿದರು. ಎಬಿವಿಪಿ ಕಾರ್ಯಕರ್ತ ಪ್ರಜ್ವಲ್ ಸಾಗರ್, ವಿನಾಯಕ, ಪ್ರಶಾಂತ, ದುರುಗೇಶ್, ಶಿವಕುಮಾರ, ಎಂ.ಎಸ್. ಸುರೇಶ್, ಜೆ.ಎಂ. ಪ್ರಮೋದ್, ಸುನಿತಾ, ಗೌರೀ, ಗಂಗಾದೀಪ, ರೂಪ, ಮಾಲಾಶ್ರೀ, ಆಯಿಶಾ, ಸುಮಾ, ರೂಪ, ರಾಜೇಶ್ವರಿ, ನಾಗವೇಣಿ, ಸವಿತಾ, ಸುನಿತಾ, ಆಶಾ, ನಳಿನ, ವೀಣಾ ಸೇರಿದಂತೆ ಸುಮಾರು 6500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

