ಬಂಧನ ವಿಳಂಬಕ್ಕೆ ಖಂಡನೆ
ಹೊನ್ನಾಳಿ: ರಾಜ್ಯದಲ್ಲಿ ಒಂದೇ ದಿನದಲ್ಲಿ ಸುಮಾರು 10ಕ್ಕೂ ಹೆಚ್ಚು ಮಹಿಳೆಯರು, ಯುವತಿಯರು ಹಾಗೂ ಬಾಲಕಿಯರ ಮೇಲೆ ಅತ್ಯಾಚಾರ ನಡೆದರೂ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಅಥವಾ ಆರೋಪಿಗಳನ್ನು ಬಂಧಿಸದೇ ಇರುವುದು ಖಂಡನಿಯ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಎ.ಬಿ. ಹನುಮಂತಪ್ಪ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಬಿಜೆಪಿ ತಾಲೂಕು ಘಟಕದ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭ ಮಾತನಾಡಿ ಅವರು, ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತವಾದ ರಕ್ಷಣೆ ಒದಗಿಸುವಲ್ಲಿ ವಿಫಲರಾಗಿರುವ ಗೃಹ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರು.
ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಪೊಲಿಸರೇ ರಕ್ಷಣೆ ನೀಡುತ್ತಿದ್ದರೂ ಗೃಹ ಸಚಿವರು ಮಾತ್ರ ಅಸಹಾಯಕರಂತೆ ವರ್ತಿಸುತ್ತಾ ತಮ್ಮ ಖಾತೆ ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಗೃಹ ಸಚಿವ ಕೆ.ಜೆ. ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅತ್ಯಾಚಾರದ ಬಗ್ಗೆ ರಾಜ್ಯದ ಕೆಲವು ಸಚಿವರು ಹಗುರವಾಗಿ ಮಾತನಾಡಿ ಮಹಿಳೆಯರನ್ನು ಅವಮಾನಿಸಿದ್ದಾರೆ. ಆದ್ದರಿಂದ ಅಂತಹ ಸಚಿವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ತಾಲೂಕು ಬಿಜೆಪಿ ಮುಖಂಡ ಡಾ.ರಾಜ್ಕುಮಾರ್ ಮಾತನಾಡಿದರು. ತಹಸೀಲ್ದಾರರಿಗೆ ಮನವಿ ಅರ್ಪಿಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಿಜೆಪಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಪ್ರಕಾಶ್, ಸತ್ತಿಗೆ ಲೋಕೇಶ್, ಕರಿಸಿದ್ದಪ್ಪ, ಬಿಸಾಟಿ ಸುರೇಶ್ ಇನ್ನಿತರರು ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

