ಅತ್ಯಾಚಾರಿಗಳಿಗೆ ಕಡಿವಾಣ ಹಾಕಿ
ದಾವಣಗೆರೆ: ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಅಂತ್ಯ ಹಾಡುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಗಾಂಧಿ ವೃತ್ತದವರೆಗೆ ನಡೆದುಬಂದ ಪ್ರತಿಭಟನಕಾರರು ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು.
ನಿದ್ರೆಯಲ್ಲಿ ಜಾರಿದ ಸರ್ಕಾರ: ಇದೇ ವೇಳೆ ಮಾತನಾಡಿದ ಮುಖಂಡರು, ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಆಕೆಯ ಗೆಳೆಯನ ಸಮ್ಮುಖದಲ್ಲಿ ಅತ್ಯಾಚಾರ ಎಸಗಿದ್ದು, ವಿಬ್ಗ್ಯೋರ್ ಶಾಲೆ ವಿದ್ಯಾರ್ಥಿನಿ ಮೇಲೆ ಶಿಕ್ಷಕನ ದುಷ್ಕೃತ್ಯ, ಬೈಂದೂರಿನ ಆಲಂದೂರಿನ ಪಿಯುಸಿ ವಿದ್ಯಾರ್ಥಿನಿ ರತ್ನಾ ಕೊಠಾರಿ ಮೇಲೆ ಅತ್ಯಾಚಾರ ಎಸಗಿ, ಕೊಲೆ... ಹೀಗೆ ನಿತ್ಯ ನಿರಂತರ ಅತ್ಯಾಚಾರ, ಕೊಲೆಯಂತಹ ಘೋರ ಕೃತ್ಯ ನಡೆದಿದ್ದರೂ, ಸರ್ಕಾರ ನಿದ್ರೆಗೆ ಜಾರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ- ಕಾಲೇಜು ಹಾಗೂ ವಿವಿ ಕ್ಯಾಂಪಸ್ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚಿಸಲು ಆದೇಶಿಸಬೇಕು. ಅಲ್ಲದೇ, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಕಾನೂನು ತಿದ್ದುಪಡಿ ಮಾಡಿ, ಮಹಿಳೆಯರಿಗೆ ರಕ್ಷಣೆಗೆ ನೀಡಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಪ್ರಬಲ ಕಾನೂನು ಜಾರಿಗೆ ತರಬೇಕು. ಇನ್ನಾದರೂ ರಾಜ್ಯ ಸರ್ಕಾರ ಇಚ್ಚಾಶಕ್ತಿ ಪ್ರದರ್ಶಿಸಿ, ಹೆಣ್ಣು ಮಕ್ಕಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಿ ಎಂದು ತಾಕೀತು ಮಾಡಿದರು.
ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚನ್ನಬಸಪ್ಪ ಮಾಳಿ, ಸಂಚಾಲಕ ಸಚಿನ್, ವಿನಯ್, ನಗರ ಕಾರ್ಯದರ್ಶಿ ಯು. ಆರ್. ಸೋಹನ್, ಸಚಿನ್, ವಿನಯ್, ಸುರೇಶ, ಪ್ರವೀಣ, ರಾಜು, ಸಮರ್ಥ, ಅಮಿತ್, ಶ್ರುತಿ, ಸಹನಾ, ಅಕ್ಷತಾ, ಸ್ವಾತಿ, ಮಧು, ಗೀತಾ, ರಂಜಿತಾ, ಮಮತಾ, ಜ್ಯೋತಿ, ಶಶಿಕಲಾ, ಸುಶೀಲ, ಮಂಗಳಾ, ಮೀನಾಕ್ಷಿ, ವನಜಾ, ರೂಪಾ, ಪರಿಮಳಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು. ನಂತರ ಉಪ ವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

