ನೇತ್ರ ತಪಾಸಣೆ ಉಚಿತ ಶಿಬಿರ 26ರಂದು
ಚನ್ನಗಿರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜು.26ರಂದು ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಹಿಂದೂಸ್ಥಾನ್ ಗ್ರೂಪ್ನ ಅಧ್ಯಕ್ಷ ರಘು ತಿಳಿಸಿದ್ದಾರೆ. ಶ್ರೀಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ, ಗೃಹ ರಕ್ಷಕ ದಳ, ಹಿಂದೂಸ್ಥಾನ್ ಗ್ರೂಪ್ಸ್, ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಸಂಸ್ಥೆ ಆಶ್ರಯದಲ್ಲಿ ಶಿಬಿರ ನಡೆಯಲಿದೆ. ಆರ್ಥಿಕವಾಗಿ ಹಿಂದುಳಿದಿರುವ ಬಡ ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸುವ ಜೊತೆಗೆ ಅವಶ್ಯಕವಿದ್ದಲ್ಲಿ ಲೆನ್ಸ್ ಅಳವಡಿಸಲಾಗುವುದು ಎಂದಿದ್ದಾರೆ. ಮಾಹಿತಿಗೆ ಮೊ.9481950829, 9740429699, 9008607474, 9980025578, 9448024886 ಇಲ್ಲಿಗೆ ಸಂಪರ್ಕಿಸಲು ಕೋರಿದ್ದಾರೆ.
ಸಗಟು ಸೊಪ್ಪಿನ ಮಾರುಕಟ್ಟೆ ಸ್ಥಳಾಂತರ
ದಾವಣಗೆರೆ: ಕೆ.ಆರ್. ಮಾರುಕಟ್ಟೆಯಲ್ಲಿ ಸೊಪ್ಪಿನ ಸಗಟು ವ್ಯಾಪಾರ ವಹಿವಾಟು ನಡೆಸುತ್ತಿರುವ ವ್ಯಾಪಾರಸ್ಥರನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದ ರೈತ ಭವನ ಹಿಂಭಾಗದಲ್ಲಿ ಸ್ಥಳಾವಕಾಶ ಮಾಡಿಕೊಟ್ಟು, ಅಲ್ಲಿಗೆ ಸ್ಥಳಾಂತರಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕ್ರಮ ಕೈಗೊಂಡಿದೆ.
ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಅನೇಕ ವರ್ಷಗಳಿಂದಲೂ ಸೊಪ್ಪಿನ ಸಗಟು ವ್ಯಾಪಾರ ವಹಿವಾಟು ನಡೆಸುತ್ತಿದ್ದ ವ್ಯಾಪಾರಸ್ಥರಿಗೆ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರ ಕುರಿತಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಸಭೆಯ ನಿರ್ಣಯದಂತೆ ಸೊಪ್ಪಿನ ಬೆಳೆಗಾರರು, ವರ್ತಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಮಾರುಕಟ್ಟೆ ಪ್ರಾಂಗಣಕ್ಕೆ ಸೊಪ್ಪಿನ ವಹಿವಾಟನ್ನು ಜು.21ರಿಂದಲೇ ಸ್ಥಳಾಂತರಿಸಲಾಯಿತು. ಕಳೆದ 3- 4 ದಿನಗಳಿಂದ ಸೊಪ್ಪಿನ ವಹಿವಾಟು ನಡೆಯುತ್ತಿದೆ. ಎಪಿಎಂಸಿ ಪ್ರಾಂಗಣದ ರೈತ ಭವನದ ಹಿಂಭಾಗದಲ್ಲಿ ಸ್ಥಳಾವಕಾಶ ಮಾಡಿಕೊಡಲಾಗಿದೆ.ಎಪಿಎಂಸಿ ಅಧ್ಯಕ್ಷ ಬಿ. ಪ್ರಭು, ಸದಸ್ಯ ಎಂ. ಶಿವಕುಮಾರ, ಕಾರ್ಯದರ್ಶಿ ಬಿ.ಎಚ್. ನರಸಿಂಹಮೂರ್ತಿ ಹಾಗೂ ಸಹಾಯಕ ಕಾರ್ಯದರ್ಶಿ ಜೆ. ಪ್ರಭು, ಎಸ್. ಶ್ಯಾಮ್ ಇತರರು ಭೇಟಿ ಮಾಡಿ, ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

