ದಾವಣಗೆರೆ

ಆ. 4ರಂದು ಸಕಾಲ ಜಿಲ್ಲಾ ಮಟ್ಟದ ಕಾರ್ಯಾಗಾರ

Published On :

ದಾವಣಗೆರೆ: ಸಕಾಲ ಸೇವೆಗಳ ಕಾಯ್ದೆಯಡಿ ಬರುವ ಎಲ್ಲಾ ಇಲಾಖೆ ಅಧಿಕಾರಿಗಳು, ಕಚೇರಿ ಸಿಬ್ಬಂದಿಗೆ ಒಂದು ದಿನದ ಕಾರ್ಯಾಗಾರವನ್ನು ಆ. 4ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ವಿವಿಧ ಇಲಾಖೆಗಳ ಸಕಾಲ ಸೇವೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಅನುಸರಿಸುವ ವಿನೂ
ತನ ಪದ್ಧತಿಗಳು, ತಂತ್ರಾಂಶದಲ್ಲಿ ಸುಧಾರಣೆ, ಕುಂದು ಕೊರತೆ ನಿರ್ವಹಣೆಯಲ್ಲಿ ಸಾಧನೆ, ಸಕಾಲದ ಬಗ್ಗೆ ಜನಾಭಿಪ್ರಾಯ, ಕೈ ಗೊಳ್ಳಬೇಕಾದ ಸುಧಾರಣಾ ಕ್ರಮಗಳ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು. ಸಕಾಲ ಯೋಜನೆ ಉಸ್ತುವಾರಿ ವಹಿಸಿರುವ ಕಚೇರಿ ವ್ಯವಸ್ಥಾಪಕರು, ಶಿರಸ್ತೇದಾರರು, ಮೇಲ್ವಿಚಾರಕರು, ವಿಷಯ ನಿರ್ವಾಹಕರಿಗೆ ಸಕಾಲದ ಬಗ್ಗೆ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನಕುಮಾರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.