ದಾವಣಗೆರೆ

ದೌರ್ಜನ್ಯ ತಡೆಗೆ ಕ್ರಮ

Published On :

ಕ.ಪ್ರ. ವಾರ್ತೆ, ದಾವಣಗೆರೆ, ಜುಲೈ 31
ಅತ್ಯಾಚಾರ, ಲೈಂಗಿಕ ದೌರ್ಜನ್ಯ ತಡೆಗೆ ಶಾಲಾ- ಕಾಲೇಜು, ಹಾಸ್ಟೆಲ್‌ಗಳಿಗೆ ಬೆಂಗಳೂರಿನಲ್ಲಿ 22 ಅಂಶದ ಸುತ್ತೋಲೆಯನ್ನು  ಹೊರಡಿಸಿದ್ದು, ಅದೇ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲೂ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠ ಡಿ. ಪ್ರಕಾಶ ತಿಳಿಸಿದರು.
ನಗರದ ಎಸ್ಪಿ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಶಾಲೆಗಳು ಮುಖ್ಯಸ್ಥರು, ಮಹಿಳಾ ಕಾಲೇಜು ಪ್ರಾಚಾರ್ಯರು, ಮಹಿಳಾ ಹಾಸ್ಟೆಲ್‌ಗಳ ವಾರ್ಡನ್‌ಗಳಿಗಾಗಿ ಏರ್ಪಡಸಿದ್ದ ಮಹಿಳೆ ಮತ್ತು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ತಡೆ ಮತ್ತು ತಿಳಿವಳಿಕೆ ಮೂಡಿಸುವ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, ಅತ್ಯಾಚಾರ, ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆಗೆ ಸಾರ್ವಜನಿಕರು, ವಿವಿಧ ಇಲಾಖೆಗಳ ಸಹಕಾರವೂ ಅತ್ಯಗತ್ಯ ಎಂದರು.
ಸಿಸಿ ಕ್ಯಾಮೆರಾ: ಶಾಲಾ, ಕಾಲೇಜು, ಹಾಸ್ಟೆಲ್, ಶಾಲಾ ವಾಹನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ವಿದ್ಯಾರ್ಥಿನಿ ಯರ ಹಾಸ್ಟೆಲ್‌ಗಳಿಗೆ ಮಹಿಳಾ ಸಹಾಯಕಿಯರನ್ನೇ ನೇಮಿಸಬೇಕು. ಸರ್ಕಾರಿ ಶಾಲಾ- ಕಾಲೇಜಿನಲ್ಲಿ ಶಿಕ್ಷಕರು, ಬೋಧಕರ ನೇಮಕಾತಿ ವೇಳೆ ಪೂರ್ವಾಪರ ಮಾಹಿತಿ ಪಡೆಯುವಂತೆ ಖಾಸಗಿ ಸಂಸ್ಥೆಗಳೂ ಇಂತಹ ಮುಂಜಾಗ್ರತೆ ವಹಿಸಬೇಕು ಎಂದರು.  
ಹೆಣ್ಣು ಮಕ್ಕಳು ನಿರ್ಭೀತಿಯಿಂದ ಇರಲು ಹಾಗೂ ಮಹಿಳೆಯರು, ವೃದ್ಧರ ರಕ್ಷಣೆಗಾಗಿ ಜಿಲ್ಲೆಯಲ್ಲಿ ಆಸರೆ ಜಾರಿಗೆ ತಂದಿದ್ದೇವೆ. ಈಗ ಮಹಿಳಾ ಸಹಾಯವಾಣಿ ಸಂಖ್ಯೆ- 259 100, 253100 ನ್ನು ಸ್ಥಾಪಿಸಿದ್ದು, ಹೆಣ್ಣು ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ ಇದಕ್ಕೆ ಕರೆ ಮಾಡಿ, ಇಲಾಖೆ ನೆರವು ಪಡೆಯ ಬಹುದುಎಂದು ಅವರು ತಿಳಿಸಿದರು.
ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ನಜ್ಮಾ ಕೌಸರ್ ಮಾತನಾಡಿ, ಪಾಲಕರ ಮಾರ್ಗದರ್ಶವೂ ಸಿಗದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆ, ಕಾಲೇಜು, ಹಾಸ್ಟೆಲ್‌ನಲ್ಲೂ ಯಾರ ಮಾತನ್ನೂ ಕೇಳುವ ಸೌಜನ್ಯ ತೋರುತ್ತಿಲ್ಲ ಎಂದರು.
ದಾವಣಗೆರೆ ಕೆ.ಆರ್. ಮಾರುಕಟ್ಟೆ ಶಾಲೆ ಮುಖ್ಯ ಶಿಕ್ಷಕರು, ಹರಿಹರದ ಮಂಜುನಾಥ ಕುಲಕರ್ಣಿ, ಕೆಎಸ್ಸೆಸ್ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಸವಿತಾ ಮಾತನಾಡಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪಿ.ಕೆ. ಮಹಾಂತೇಶ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆನಂದ್, ಪ್ರಭಾರ ಡಿಡಿಪಿಐ ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ, ಬಸವ ರಾಜ, ರಾಜಶೇಖರ, ಹನುಮಂತಪ್ಪ, ಪ್ರಾಚಾರ್ಯ ಡಾ. ಮಲ್ಲಿಕಾರ್ಜನ ಕಲಮರಹಳ್ಳಿ, ಸತ್ಯನಾರಾಯಣ ರೆಡ್ಡಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.