ಇಂದು ಸಂಧಾನ
ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶನಿವಾರ ಆರಂಭವಾಗಿರುವ ಮುಷ್ಕರ ಫೆ. 11ರಂದು ಆರೋಗ್ಯ ಸಚಿವರೊಂದಿಗೆ ನಡೆಯುವ ಮಾತುಕತೆಯಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಂಡಲ್ಲಿ ಮುಷ್ಕರ ಹಿಂತೆಗೆದುಕೊಳ್ಳಲಾಗುವುದು ಎಂದು ವೈದ್ಯಾಧಿಕಾರಿ ಡಾ. ವನಕೇರಿ ತಿಳಿಸಿದ್ದಾರೆ. ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆಯ ಎಲ್ಲ ಸ್ತರದ ವೈದ್ಯಾಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಜನರಿಗೆ ದೊರೆಯಬೇಕಿರುವ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಮುಷ್ಕರದಿಂದ ಜನರಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದೇವೆ ಎಂದಿದ್ದಾರೆ. ಮುಷ್ಕರ ನಿರತ ವೈದ್ಯರ ಬೇಡಿಕೆಗಳನ್ನು ಆಲಿಸುವುದಕ್ಕೆ ಆರೋಗ್ಯ ಸಚಿವರು ಮಾತುಕತೆಗೆ ಆಹ್ವಾನಿಸಿದ್ದಾರೆ. ಒಂದು ವೇಳೆ ಮಾತುಕತೆ ಫಲಪ್ರದವಾದಲ್ಲಿ ತಕ್ಷಣವೇ ಮುಷ್ಕರ ಹಿಂತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇಂದು ಜಾಗೃತಿ ಕಾರ್ಯಕ್ರಮ
ನವಲಗುಂದ: ದೆಹಲಿಯ ಮಾನವ ಹಕ್ಕು ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಫೆ. 11ರಂದು ಬೆಳಗ್ಗೆ 11ಕ್ಕೆ ಸ್ಥಳೀಯ ಶಂಕರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ನಿರ್ಮೂಲನಾ ಮತ್ತು ಮಾನವ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಾ. ಮೋಹನರಾವ್ ನಲವಡಿ, ಉಪಾಧ್ಯಕ್ಷೆ ಡಾ. ರೀಟಾ ಹಂಡಾ, ಜಿಲ್ಲಾಧ್ಯಕ್ಷ ಡಾ. ಸುರೇಶಕುಮಾರ ಪೆಡಂ ಆಗಮಿಸಲಿದ್ದಾರೆ ಎಂದು ಎನ್.ಎಂ. ಎಲಿಗಾರ ತಿಳಿಸಿದ್ದಾರೆ.
ಬಜೆಟ್‌ನಲ್ಲಿ ನಿರ್ಲಕ್ಷ್ಯ
ಧಾರವಾಡ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಂಡಿಸಿರುವ ಬಜೆಟ್ ಸುಳ್ಳು ಭರವಸೆಗಳಿಂದ ಕೂಡಿದೆ. ಇದು ವಿದ್ಯಾರ್ಥಿಗಳ ವಿರೋಧಿ ಬಜೆಟ್ ಆಗಿದೆ ಎಂದು ಭಾರತೀಯ ವಿದ್ಯಾರ್ಥಿ ಫೆಡರೇಷನ್ ಟೀಕಿಸಿದೆ. ಶೆಟ್ಟರ್ ಮಂಡಿಸಿದ ಬಜೆಟ್‌ನಲ್ಲಿ ಹೊಸತನದ ಹೆಸರಲ್ಲಿ ಸಮಾಧಾನ ಪಡಿಸುವ ತಂತ್ರ ಅಡಗಿದೆ. ಚುನಾವಣೆ ದೃಷ್ಟಿಯಿಂದ ಬಜೆಟ್‌ನ ಗಾತ್ರವನ್ನು ಹೆಚ್ಚಿಸಿದೆ. ಶಿಕ್ಷಣ ಕ್ಷೇತ್ರದ ಬದಲಾಗಿ ಮಠಗಳಿಗೆ ಹೆಚ್ಚು ಹಣ ನೀಡುವ ಮೂಲಕ ಮತ್ತೆ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿದೆ. ಬಜೆಟ್‌ನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳ ಉನ್ನತೀಕರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ, ಮೂಲ ಸೌಲಭ್ಯಗಳಿಗೆ ಒತ್ತು ನೀಡುವ ಕುರಿತು ಪ್ರಸ್ತಾಪ ಮಾಡಿಲ್ಲ. ಉನ್ನತ ಶಿಕ್ಷಣಕ್ಕೆ ಕೇವಲ ರು. 3067 ಕೋಟಿ ಹಣ ಮೀಸಲಿಟ್ಟಿದ್ದು, ವಿವಿಗಳನ್ನು ಅಭಿವೃದ್ಧಿ ಪಡಿಸಲು ಹಾಗೂ ಉನ್ನತೀಕರಿಸಲು ಇದು ಸಾಕಾಗುವುದಿಲ್ಲ ಎಂದು ಹೇಳಿದೆ. ಶಿಕ್ಷಣ ಕ್ಷೇತ್ರಕ್ಕೆ ಶೇ. 30ರಷ್ಟು ಹಣ ಮೀಸಲಿಡಬೇಕು ಎಂಬ ಶಿಕ್ಷಣ ತಜ್ಞ ಡಾ. ಕೋಠಾರಿ ಆಯೋಗದ ಶಿಫಾರಸನ್ನು ಸಿಎಂ ಶೆಟ್ಟರ್ ನಿರ್ಲಕ್ಷಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ದೂರಿದೆ.
16ರಿಂದ ಕಲ್ಮೇಶ್ವರ ಜಾತ್ರೆ
ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಬೀರವಳ್ಳಿಯ ಕಲ್ಮೇಶ್ವರ ಜಾತ್ರೆ, ನೂತನ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಫೆ. 16ರಿಂದ ಮೂರು ದಿನ ನಡೆಯಲಿದೆ. ಫೆ. 16ರಂದು ಬೆಳಗ್ಗೆ 7ಕ್ಕೆ ವೇದಾಂತಪರಿಷತ್ ಮತ್ತು ಕಲ್ಮೇಶ್ವರ ದೇವರ ನೂತನ ಉದ್ಘಾಟನೆ ಸಮಾರಂಭ ಜರುಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

