ಧಾರವಾಡ

ಬಿಪಿಎಲ್‌ಗೆ ಉಚಿತ ಅಕ್ಕಿ

Published On :

ಹುಬ್ಬಳ್ಳಿ: ಬಿಎಸ್‌ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ, ಅವಿವಾಹಿತ ಬಡ ಯುವಕ ಯುವತಿಯರಿಗೆ ಕಂಕಣ ಬಲ ಜೊತೆಗೊಂದುಆರ್‌ಸಿಸಿ ಮನೆ, 1ರಿಂದ 9ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ತಾಯಂದಿರ ಖಾತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ತಿಂಗಳು 700, ಕಾಲೇಜು ವ್ಯಾಸಂಗ ಮಾಡುವವರಿಗೆ 1000 ಜಮಾ ಮಾಡುವುದಾಗಿ ಬಿಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ಶ್ರೀರಾಮುಲು ಭರವಸೆ ನೀಡಿದ್ದಾರೆ. ಸೋಮವಾರ ಗೋಕುಲ್ ಗಾರ್ಡ್‌ನ್‌ನಲ್ಲಿ ನಡೆದ ಧಾರವಾಡ ಜಿಲ್ಲಾ ಬಿಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪಾಸಾದ ಎಲ್ಲ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟ್ಯಾಪ್, ರೈತರಿಗೆ ಬಿತ್ತನೆ ಮಾಡಿದ ದಿನವೇ ಕೃಷಿ ಉತ್ಪನ್ನಗಳಿಗೆ ಸರ್ಕಾರದಿಂದ ಬೆಲೆ ನಿಗದಿ ಮಾಡಲಾಗುವುದು. ಒಂದು ವೇಳೆ ಮಾರುಕಟ್ಟೆಯಲ್ಲಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಬೆಲೆ ಬರುವಂತಿದ್ದರೆ ಆ ಬೆಲೆಗೆ ರೈತರು ಮಾರಾಟ ಮಾಡಬಹುದು. ಒಂದು ವೇಳೆ ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಕಡಿಮೆ ಬೆಲೆ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿದ್ದರೆ ಸರ್ಕಾರ ನಿಗದಿ ಮಾಡಿದ ದರಕ್ಕನುಗುಣವಾಗಿ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲಾಗುವುದು. ಅಲ್ಲದೇ ರೈತರು ಬೆಳೆ ವಿಮೆ ಪಾವತಿಸಬೇಕಿಲ್ಲ. ಆಡಳಿತಕ್ಕೆ ಬರುವ ಬಿಎಸ್ಸಾರ್ ಈ ಕೆಲಸ ಮಾಡಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.