ಕೆಜೆಪಿಗೆ ನೇಮಕ (ಸುದ್ದಿ ಸಂಕ್ಷೇಪ)
ಕಲಘಟಗಿ: ಕರ್ನಾಟಕ ಜನತಾ ಪಕ್ಷದ ತಾಲೂಕು ಯುವ ಘಟಕದ ಸಂಚಾಲಕರನ್ನಾಗಿ ತಬಕದ ಹೊನ್ನಳ್ಳಿ ಗ್ರಾಮದ ಶಿವಾನಂದ ಜಿ. ಹಿರೇಮಠ ನೇಮಕಗೊಂಡಿದ್ದಾರೆ. ಜಿಲ್ಲಾ ಕೆಜೆಪಿ ಸಂಚಾಲಕ ಸಿ.ಎಂ. ನಿಂಬಣ್ಣವರ ಈ ನೇಮಕ ಮಾಡಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಕುಂಬಾರಿಕೆ ಅಭಿವೃದ್ಧಿ: ಅರ್ಜಿ ಆಹ್ವಾನ
ಧಾರವಾಡ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕುಂಬಾರಿಕೆ ಅಭಿವೃದ್ಧಿಗಾಗಿ ಆಧುನಿಕ ಉಪಕರಣ ಖರೀದಿ ಹಾಗೂ ದುಡಿಮೆ ಬಂಡವಾಳಕ್ಕಾಗಿ ಶೇ. 4ರ ಬಡ್ಡಿ ದರದಲ್ಲಿ ರು. 25 ಸಾವಿರ ಸಹಾಯ ಧನ ಸಾಲ ಅರ್ಜಿ ಆಹ್ವಾನಿಸಲಾಗಿದೆ. ಕುಂಬಾರ ಕಾಯಕ ಸಮುದಾಯದ ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ ಸ್ವಹಸ್ತಾಕ್ಷರದ ಅರ್ಜಿಯನ್ನು ಇಲ್ಲಿನ ಮಿನಿವಿಧಾನ ಸೌಧದಲ್ಲಿರುವ ನಿಗಮದ ಕಚೇರಿಗೆ ಫೆ. 28ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 0836 -2446382 ಸಂಪರ್ಕಿಸಬೇಕೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಹನ ಬಳಕೆಗೆ ಅನುಮತಿ ಕಡ್ಡಾಯ
ಧಾರವಾಡ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಯಾವುದೇ ವಾಹನ ಬಳಕೆ ಮಾಡಲು ಮತ್ತು ಬ್ಯಾನರ್, ಪೋಸ್ಟರ್, ಬಂಟಿಂಗ್ಸ್ ಇತ್ಯಾದಿಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವ ಮೊದಲು ಸಂಬಂಧಿಸಿದ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯ್ತಿಗಳ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲ ತಿಳಿಸಿದ್ದಾರೆ. ಸಂಬಂಧಿತ ಆಯುಕ್ತರು, ಮುಖ್ಯಾಧಿಕಾರಿಗಳು ಚಾಲ್ತಿಯಲ್ಲಿರುವ ನಿಯಮಾವಳಿ ಅನ್ವಯ ಕಟ್ಟುನಿಟ್ಟಾಗಿ ಪರಿಶೀಲಿಸಿ ಪ್ರಕರಣವಾರು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕೆಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಲಕ್ಷ್ಮಣ
ಹುಬ್ಬಳ್ಳಿ: ಕರ್ನಾಟಕ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನ್ಯಾಯವಾದಿ ಲಕ್ಷ್ಮಣ ಬೀಳಗಿ ನೇಮಕಗೊಂಡಿದ್ದಾರೆ. ಈ ನೇಮಕವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಗೋಖಲೆ ಪ್ರಕಟಿಸಿದ್ದಾರೆ. ಜಿಪಂನ ಮಾಜಿ ಸದಸ್ಯರೂ ಆಗಿರುವ ಬೀಳಗಿ ಅನೇಕ ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಲಕ್ಷ್ಮಣ ಬೀಳಗಿ ಅವರು ಮಾಜಿ ಸಚಿವ ಸೈದ್ಧಾಂತಿಕ ರಾಜಕಾರಣಿ ಕೆ.ಎಸ್. ಬೀಳಗಿಯವರ ಪುತ್ರರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

