ಧಾರವಾಡ

ಮತ ಎಣಿಕೆ ಸುಸೂತ್ರ

Published On :

ಹುಬ್ಬಳ್ಳಿ: ಸೋಮವಾರ ಬೆಳಗಿನ ಜಾವ ವಿದ್ಯಾನಗರ ಪ್ರದೇಶದಲ್ಲಿ ಜನಜಂಗುಳಿ. ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿನ ಸುದ್ದಿ ತಿಳಿದುಕೊಳ್ಳುವ ತವಕ. ಇನ್ನೂ ಕೆಲವರ ಮೊಗದಲ್ಲಿ ಆಂತಕದ ಛಾಯೆ. ಪೊಲೀಸರ ಸರ್ಪಗಾವಲು. ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿದ್ದ ಪಾಲಿಕೆ ಚುನಾವಣೆ ಮತ ಎಣಿಕೆ ವೇಳೆ ಕಂಡು ಬಂದ ದೃಶ್ಯಗಳಿವು. ಮತ ಎಣಿಕೆ ಕೇಂದ್ರದ ಸಮೀಪ ವಿವಿಧ ಪಕ್ಷದ ಸಾವಿರಾರು  ಕಾರ್ಯಕರ್ತರು ನೆರೆದಿದ್ದರು. ಪೊಲೀಸ್ ಇಲಾಖೆ, ಮಹಾನಗರದಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಹೀಗಾಗಿ, ವಿಜೇತ ಅಭ್ಯರ್ಥಿಗಳ ಹೆಸರು ಘೋಷಣೆ ಆದಾಗ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಮೊದಮೊದಲು ಹಿಂದೇಟು ಹಾಕಿದರು. ಬಿಸಿಲು ಏರುತ್ತಿತ್ತು. ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಫಲಿತಾಂಶ ಪ್ರಕಟವಾಗುತ್ತಿದಂತೆಯೇ ಕಾರ್ಯಕರ್ತರು ಪಟಾಕಿ ಸಿಡಿಸಿ ಗುಲಾಲು ಎರಚಾಡಿಕೊಂಡು ವಿಜಯೋತ್ಸವ ಆಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.