ಪ್ರವಾಸೋದ್ಯಮ ತಾಣವಾಗಿಸಲು ಬದ್ಧ
ಕನ್ನಡಪ್ರಭ ವಾರ್ತೆ, ಧಾರವಾಡ ಜು. 2
ಧಾರವಾಡ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ಐತಿಹಾಸಿಕ ತಾಣಗಳನ್ನು ಅಭಿವೃದ್ಧಿಪಡಿಸಿ ಜಿಲ್ಲೆಯನ್ನು ಪ್ರವಾಸೋದ್ಯಮ ತಾಣವಾಗಿ ರೂಪಿಸುವ ಚಿಂತನೆ ಇದೆ ಎಂದು ನೂತನ ಜಿಲ್ಲಾಧಿಕಾರಿ ಪಿ. ರಾಜೇಂದ್ರ ಚೋಳನ್ ತಿಳಿಸಿದರು.
ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ ಈ ಕುರಿತಾಗಿ ಹಮ್ಮಿಕೊಂಡ ಯೋಜನೆಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಪ್ರಸ್ತಾವನೆ ಕೇಳಿದ್ದಾರೆ. ಧಾರವಾಡ ಸಾಹಿತಿಗಳು, ಬುದ್ಧಿಜೀವಿಗಳು, ಹಿರಿಯರ ಸಲಹೆಗಳನ್ನು ಪಡೆದು ಸದ್ಯದಲ್ಲಿಯೇ ಪ್ರಸ್ತಾವನೆ ಕಳುಹಿಸುತ್ತೇನೆ. ಧಾರವಾಡನ್ನು ಕೇಂದ್ರ ಸ್ಥಾನದಲ್ಲಿಟ್ಟು ಬೆಳಗಾವಿ, ಹಾವೇರಿ, ಗದಗ ಜಿಲ್ಲೆಗಳ ಪ್ರವಾಸಿ ತಾಣಗಳಿಗೂ ಈ ಮೂಲಕ ಸಂಪರ್ಕ ಸಾಧಿಸುವುದಾಗಿ ತಿಳಿಸಿದರು.
ಈ ಹಿಂದಿನ ದಿನಗಳಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಉದ್ಯಾನ, ಕೆರೆಗಳು ಅಭಿವೃದ್ಧಿಯಾಗಿದೆ. ನಿರ್ವಹಣೆ ಕೊರತೆಯಿಂದ ಉದ್ಯಾನ ಹಾಳಾಗುತ್ತಿದ್ದರೆ, ಕೆರೆಗಳು ಕೊಳಚೆ ನೀರಿನಿಂದ ತುಂಬಿವೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವೆ. ಜಿಲ್ಲೆಯ ಶಿಕ್ಷಣ ಪ್ರಗತಿ ಬಗ್ಗೆ ಡಿಡಿಪಿಐ ಅವರೊಂದಿಗೆ ಚರ್ಚಿಸಿದ್ದು, ಇನ್ನಷ್ಟು ಪ್ರಗತಿಗೆ ಪ್ರಯತ್ನಿಸುವೆ. ವಸತಿ ನಿಲಯಗಳ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಜೂನ್ ತಿಂಗಳಲ್ಲಿ ಮಳೆಯಾಗದಿರುವುದು ರೈತರಿಗೆ ತೊಂದರೆಯಾಗಿದೆ. ಈ ವಿಷಯವಾಗಿ ಕೃಷಿ, ಪಶುಸಂಗೋಪನೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಇರುವ ಕುಂದಗೋಳ ತಾಲೂಕಿನ 16 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

