ಯೋಗದ ಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 27
ಪತಂಜಲಿ ಯೋಗ ಶಿಕ್ಷಣ ಸಮಿತಿಯಲ್ಲಿ ತರಬೇತಿ ಪಡೆಯುತ್ತಿರುವ ಯೋಗ ಶಿಕ್ಷಕರು ಮುಂದಿನ ಹತ್ತು ವರ್ಷಗಳಲ್ಲಿ ಕನಿಷ್ಠ 6 ಸಾವಿರ ಶಾಖೆಗಳನ್ನ್ನು ತೆರೆದು ಯೋಗದ ಕುರಿತು ಜಾಗೃತಿ ಮೂಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಸಲಹೆ ನೀಡಿದರು.
ನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಹುಬ್ಬಳ್ಳಿ ಶಾಖೆಯ ಆಶ್ರಯದಲ್ಲಿ ಭಾನುವಾರ ನಡೆದ ಯೋಗಸ್ಪರ್ಶ-2014 ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನೂತನ ಶಾಖೆಗಳನ್ನ್ನು ತೆರೆದ ಪ್ರಾರಂಭದಲ್ಲಿ ಕೆಲವು ತೊಂದರೆಗಳು ಎದುರಾದರೂ ಅವುಗಳನ್ನ್ನು ಮೆಟ್ಟಿ ನಿಂತು ಸಮಾಜ ಪರಿವರ್ತಿಸುವ ಯೋಗಾಭ್ಯಾಸವನ್ನು ಎಲ್ಲೆಡೆ ವಿಸ್ತರಿಸಬೇಕು ಎಂದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಪೂರಕ. ಶಿಬಿರಗಳು ಕೇವಲ ತರಬೇತಿ ಪಡೆಯಲು ಸೀಮಿತವಾಗಿರದೆ ತಾವು ಕಲಿತ ಯೋಗ ವಿದ್ಯೆಯನ್ನು ಮತ್ತೊಬ್ಬರಿಗೆ ತಲುಪಿಸಬೇಕು. ಮಾನಸಿಕ ನೆಮ್ಮದಿ ನೀಡುವ ಜತೆಗೆ ಜಗತ್ತಿನ ಎಲ್ಲ ವರ್ಗದ ಜನರನ್ನು ಪರಿವರ್ತಿಸುವ ಶಕ್ತಿ ಯೋಗಕ್ಕಿದ್ದು, ಇದರ ವ್ಯಾಪ್ತಿ ವಿಸ್ತರಿಸಬೇಕು ಎಂದು ಹೇಳಿದರು.
ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಧಾನ ಸಂಚಾಲಕ ಅ.ರ. ರಾಮಸ್ವಾಮಿ ಮಾತನಾಡಿ, ಆರೋಗ್ಯವಂತ ಸಮಾಜದ ನಿರ್ಮಾಣ ಯೋಗದಿಂದ ಮಾತ್ರ ಸಾಧ್ಯ ಎಂದರು. ಸುಳ್ಳದ ಅಭಿನವ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅಧ್ಯಕ್ಷತೆ ವಹಿಸಿದ್ದರು. ಸಿ.ವಿ. ಮಹಾದೇವಯ್ಯ, ಪ್ರಕಾಶ ಬೆಂಡಿಗೇರಿ, ಪ್ರಸನ್ನ ದೀಕ್ಷಿತ್, ದಯಾನಂದ ಮಗಜಿಕೊಂಡಿ ಮತ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

