ಧಾರವಾಡ

ರಾ.ಹೆ. ಸುಧಾರಣೆಗೆ ಗಡ್ಕರಿ-ಜೋಶಿ ಚರ್ಚೆ

Published On :

ಹುಬ್ಬಳ್ಳಿ: ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹೊಸದಿಲ್ಲಿಯಲ್ಲಿ ಸೋಮವಾರ ಭೇಟಿ ಮಾಡಿದ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ, ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ಸುಧಾರಣೆ ಕುರಿತು ಚರ್ಚಿಸಿದರು.
ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿ ಸೇರಿದಂತೆ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಸುಧಾರಣೆಗೆ ರಾಜ್ಯಕ್ಕೆ ಬರಬೇಕಿರುವ ಕೇಂದ್ರದ ರಸ್ತೆ ನಿಧಿ ಕುರಿತು ಚರ್ಚಿಸಲಾಯಿತು. ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಮಧ್ಯದ ಈಗಿರುವ ದ್ವಿಪಥ ರಸ್ತೆಯನ್ನು ಷಟ್ಪಥವಾಗಿ ಪರಿವರ್ತಿಸುವಲ್ಲಿ ಹಾಗೂ ಹುಬ್ಬಳ್ಳಿ-ಹಾವೇರಿ ಮಧ್ಯದ ಚತುಷ್ಪತ ರಸ್ತೆಯನ್ನು ಷಟ್ಪಥವನ್ನಾಗಿಸುವಲ್ಲಿ ಆಗುತ್ತಿರುವ ವಿಳಂಬದ ಕುರಿತು ವಿವರವಾಗಿ ಚರ್ಚಿಸಲಾಯಿತು ಎಂದು ಸಂಸದ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ ಹೊರವಲಯದಲ್ಲಿ ನಿರ್ಮಿಸಲಾಗುವ ರಾಷ್ಟ್ರೀಯ ಹೆದ್ದಾರಿ 218, 63 ಹಾಗೂ 4ನ್ನು ಜೋಡಿಸುವ ಬೈಪಾಸ್ ರಸ್ತೆಗೆ ಅವಶ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣವಾಗಿದ್ದರೂ 2014-15ನೇ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸುವ ಬಗ್ಗೆ ಹಾಗೂ ಒಟ್ಟಾರೆ ರಾಜ್ಯದ ಹೆದ್ದಾರಿಗಳ ಸುಧಾರಣೆ ಮತ್ತು ಅನುದಾನ ನೀಡುವಲ್ಲಿ ಹಿಂದಿನ ಸರ್ಕಾರಗಳ ನಿಧಾನಗತಿಯ ನೀತಿಯನ್ನು ಸಹ ಸಂಸದ ಜೋಶಿ ಇದೇ ಸಂದರ್ಭದಲ್ಲಿ ಸಚಿವರ ಗಮನಕ್ಕೆ ತಂದರು. ಧಾರವಾಡ ಲೋಕಸಭೆ ವ್ಯಾಪ್ತಿಯ ಹೆದ್ದಾರಿ ಸೇರಿದಂತೆ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಸಚಿವ ನಿತಿನ್ ಗಡ್ಕರಿ, ರಾಜ್ಯ, ಧಾರವಾಡ ಲೋಕಸಭೆ ವ್ಯಾಪ್ತಿಯ ಯೋಜನೆಗಳ ಅನುಷ್ಠಾನ ಅವಶ್ಯವಾಗಿದೆ. ಈ ವಿಷಯಗಳ ಕುರಿತು ಚರ್ಚಿಸಲು ಕೇಂದ್ರ ಹೆದ್ದಾರಿ ಇಲಾಖೆಗಳ ಸಭೆ ಶೀಘ್ರ ಕರೆಯಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.