ದಂಪತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಧಾರವಾಡ: ಬಳ್ಳಾರಿಯ ಮಾಜಿ ಮೇಯರ್ ಶಶಿಕಲಾ ಹಾಗೂ ಅವರ ಕುಟುಂಬದವರು ಸವಿತಾ ಸಮಾಜದ ದಂಪತಿ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವುದನ್ನು ಇಲ್ಲಿಯ ಕ್ಷೌರಿಕ ಹಿತರಕ್ಷಣಾ ವೇದಿಕೆ ಖಂಡಿಸಿದೆ.
ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಕ್ಷೌರಿಕ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇದಿಕೆ ಸದಸ್ಯರು, ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಜೂ. 26ರಂದು ಬಳ್ಳಾರಿಯಲ್ಲಿ ಮಾಜಿ ಮೇಯರ್ ಮನೆ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸತೀಸ ಅರಲೇಕರ, ಚಂದ್ರ ಅಂಗಡಿ, ಮೋಹನ ಗೊರೆ, ಸುರೇಶ ಹುಲ್ಲೂರ, ವಿಜಯ ಮಹಾಲೆ, ಅತಾವುಲ್ಲಿ ಸವಣೂರ, ಶ್ರೀಧರ ಕೊಲ್ಲಾಪುರೆ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

