ಸಂಕನೂರ ಗೆಲ್ಲಿಸಿ: ಮುನೇನಕೊಪ್ಪ
ಹುಬ್ಬಳ್ಳಿ: ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರು ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಭಿವೃದ್ಧಿಪರ ಕೆಲಸ ಮಾಡುವ ಬಿಜೆಪಿಯನ್ನೇ ಮತದಾರ ಕೈ ಹಿಡಿಯಬೇಕು. ಸಂಕನೂರ 30 ವರ್ಷಗಳಿಂದ ಶಿಕ್ಷಕರ, ಪದವೀಧರರ ಸಮಸ್ಯೆಗೆ ಸ್ಪಂದಿಸಿ, ಅವರ ಪರವಾಗಿ ಹೋರಾಟ ಮಾಡಿದ್ದಾರೆ. ಈ ಕ್ಷೇತ್ರದ ಹಾಗೂ ಪದವೀಧರರ ನೋವು -ನಲಿವುಗಳನ್ನು ಅರಿತಿದ್ದಾರೆ. ಅವರನ್ನು ಆಯ್ಕೆ ಮಾಡಿದಲ್ಲಿ ಕ್ಷೇತ್ರದಲ್ಲಿ ಪರಿಣಾಮಕಾರಿ ಬದಲಾವಣೆ ಕಾಣಲು ಸಾಧ್ಯ. ಪ್ರಸಕ್ತ ಚುನಾವಣೆಯಲ್ಲಿ ಎಲ್ಲರೂ ಅವರ ಗೆಲವಿಗೆ ಶ್ರಮಿಸಿದ್ದಾರೆ ಎಂದರಿದ್ದಾರೆ. ಕಣದಲ್ಲಿ ಪ್ರತಿಪಕ್ಷಗಳು ಜಗದೀಶ ಶೆಟ್ಟರ್ ಕುರಿತಾಗಿ ಅನವಶ್ಯಕ ಟೀಕೆಗಳನ್ನು ಮಾಡುತ್ತಿದ್ದಾರೆ. ಅವರು ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಅಭ್ಯರ್ಥಿ ಆಯ್ಕೆ ಅಥವಾ ಪಕ್ಷದ ವಿಚಾರಗಳ ಕುರಿತಾಗಿ ಸೂಕ್ತ ನಿರ್ಧಾರ ಕೈಗೊಳ್ಳುವವರು. ಸಂಕನೂರ ಪರವಾಗಿಯೂ ಜಾತಿ ರಾಜಕೀಯ ಮಾಡಿಲ್ಲ. ಪ್ರತಿಪಕ್ಷಗಳ ಇಂಥ ಟೀಕೆಗಳಿಗೆ ಮತದಾರರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಸಂಕನೂರ ಆಯ್ಕೆ ನಿಶ್ಚಿತ: ಶಾಸಕ ಬೆಲ್ಲದ
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಆಯ್ಕೆ ನಿಶ್ಚಿತವೆಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಬಿಜೆಪಿ ಅಭ್ಯರ್ಥಿ ಪರ ಕೇಂದ್ರ ಹಾಗೂ ರಾಜ್ಯದ ನಾಯಕರು ತುರುಸಿನ ಪ್ರಚಾರ ಮಾಡಿದ್ದು, ಮತದಾರರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಮತದಾರರು ಸಂಕನೂರ ಅವರನ್ನು ವೈಯಕ್ತಿಕವಾಗಿ ಬಲ್ಲವರು ಕಾರಣ ಅವರ ಆಯ್ಕೆ ಖಚಿತ ಎಂದರು. ಮೇಯರ್ ಶಿವು ಹಿರೇಮಠ, ಹೇಮರಾಜ್ ಭಂಡಾರಿ, ಪ್ರಕಾಶ ಗೋಡಬೋಲೆ, ವಿಜಯಾನಂದ ಶೆಟ್ಟಿ, ಸಂಜಯ ಕಪಟಕರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

